ನಟ ದಿಗಂತ್ ಅಭಿನಯದ “ರುದ್ರ ಕಾಲ” ಕ್ಕೆ ಮಹೂರ್ತ
ನಟ ದಿಗಂತ್ ಅಭಿನಯದ “ರುದ್ರ ಕಾಲ” ಚಿತ್ರದ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲk ತೋರಿದರೆ . ನಿರ್ದೇಶಕ ರಾಜ್ ಗುರು ಕ್ಯಾಮೆರಾ ಚಾಲನೆ ಮಾಡಿದರು
ನಿರ್ದೇಶಕ ಗೋಪಿ ಮಾತನಾಡಿ ತೆಲುಗಿನಲ್ಲಿ ಎರಡು, ಕನ್ನಡದಲ್ಲಿ ಒಂದು ಚಿತ್ರ ನಿರ್ದೇಶನ ಮಾಡಿದ್ದೇನೆ. “ರುದ್ರ ಕಾಲ” ನಿರ್ದೇಶನದ ನಾಲ್ಕನೇ ಚಿತ್ರ.ಚಿತ್ರ ಕೂಡ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಕ್ರೈಮ್ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಎಮೋಷನ್ ಕಥಾಹಂದರ ಹೊಂದಿರುವ ಚಿತ್ರ. ನಟಿ ಸಮಂತ ಚಿತ್ರದ ಶೀರ್ಷಿಕೆ ಅನಾವರಣ ಮಾಡಿಕೊಟ್ಟಿದ್ದರು. ಸಹೋದರ ರಮೇಶ್ ಚಿತ್ರಕ್ಕೆ ಕಥೆ ಬರೆದಿದ್ದಾರೆ ಎಂದರು
ನಟ ದಿಗಂತ್ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ಅಧ್ಯಕ್ಷ” ಚಿತ್ರದ ನಾಯಕಿ ಹೆಬಾ ಪಟೇಲ್ ಬಹಳ ವರ್ಷಗಳ ನಂತರ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಟಿ ವಂಶಿ, ನಟ ಗೋವಿಂದೇ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಕ್ರಿಸ್ಟೋಫರ್ ಜೋಸೆಫ್ ಛಾಯಾಗ್ರಹಣ, ರುದ್ರ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಚನ್ನಯ್ಯ ಸಾಹಸ ನಿರ್ದೇಶನವಿರುವ ಈ ಚಿತ್ರವನ್ನು ರಮೇಶ್ ನಾಯ್ಕ ನಿರ್ಮಿಸುತ್ತಿದ್ದಾರೆ. ರಂಜಿತ ನವೀನ್ ಸಹ ನಿರ್ಮಾಪಕರು. ಮೇ ತಿಂಗಳಲ್ಲಿ ಬೆಂಗಳೂರಿನಲ್ಲೇ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರಕ್ಕೆ ಚಾಲನೆ ನೀಡಿದ ಯೋಗರಾಜ್ ಭಟ್ ಹಾಗೂ ರಾಜ್ ಗುರು ಅವರಿಗೆ ಧನ್ಯವಾದ ಎಂದರು.
ನಟ ದಿಗಂತ್ ಮಾತನಾಡಿ ಕಳೆದವರ್ಷ ಎರಡು ಹೊಸಚಿತ್ರಗಳನ್ನು ಒಪ್ಪಿಕೊಂಡಿದ್ದೆ.. ಇದೊಂದು ಕ್ರೈಮ್ ಥ್ರಿಲ್ಲರ್ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ. ರಮೇಶ್ ಒಳ್ಳೆಯ ಕಥೆ ಬರೆದಿದ್ದಾರೆ. ನಿರ್ದೇಶಕ ಗೋಪಿ ಕಥೆ ಹೇಳುವಾಗಲೇ ಕಥೆ ಬಹಳ ಇಷ್ಟವಾಯಿತು. ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಯೋಗರಾಜ್ ಭಟ್ ಬಂದು ಚಿತ್ರಕ್ಕೆ ಚಾಲನೆ ನೀಡಿದ್ದು ಬಹಳ ಖುಷಿಯಾಗಿದೆ ಎಂದು ತಿಳಿಸಿದರು.
ನಾಯಕಿ ಹೆಬಾ ಪಟೇಲ್ ಮಾತನಾಡಿ “ಅಧ್ಯಕ್ಷ” ನಂತರ ಹತ್ತು ವರ್ಷಗಳ ಬಳಿಕ ನಾನು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಆ ಚಿತ್ರಕ್ಕೆ ಕನ್ನಡಿಗರು ತೋರಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ ಎಂದರು .
ನಿರ್ಮಾಪಕ ರಮೇಶ್ ನಾಯ್ಕ ಮಾತನಾಡಿ ನಿರ್ದೇಶಕ ಗೋಪಿ ಹೇಳಿದ ಕಥೆ ಇಷ್ಟವಾಯಿತು. ದಿಗಂತ್ ಚಿತ್ರಕ್ಕೆ ಸೂಕ್ತ ನಾಯಕ ಎನಿಸಿತು. ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಆಗಮಿಸಿದ ಗಣ್ಯರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ಎಂದರು
ಸಹ ನಿರ್ಮಾಪಕಿ ರಂಜಿತ ನವೀನ್ ಮಾತನಾಡಿ, ನಮ್ಮ ಹೊಸಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು. ಕಾರ್ಯಕಾರಿ ನಿರ್ಮಾಪಕ ಶಿವರಾಜ್, ನಟಿ ವಂಶಿ, ನಟ ಗೋವಿಂದೇಗೌಡ, ಛಾಯಾಗ್ರಾಹಕ ಕ್ರಿಸ್ಟೋಫರ್ ಜೋಸೆಫ್, ಸಾಹಸ ನಿರ್ದೇಶಕ ಚನ್ನಯ್ಯ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

