“ಕೆಡಿ” ಏಪ್ರಿಲ್ 30ರಂದು ಬಿಡುಗಡೆ: ಕಾಲ ಭೈರವನಾಗಿ ಕಿಚ್ಚ ಸುದೀಪ್
ಜೋಗಿ ಪ್ರೇಮ್ ನಿರ್ದೇಶನದ “ಕೆಡಿ” ಚಿತ್ರ ಸಾಕಷ್ಟು ವಿವಾದಗಳನ್ನು ದಾಟಿ ಏಪ್ರಿಲ್ 30ರಂದು ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ, ದ್ರುವ ಸರ್ಜಾ, ರೀಶ್ಮಾ ನಾಣಯ್ಯ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಕಾಲಬೈರವನಾಗಿ ಕಾಣಿಸಿಕೊಂಡಿದ್ದಾರೆ

ಕಿಚ್ಚ ಸುದೀಪ್ ಪಾತ್ರದ ಬಗ್ಗೆ ಮಾಹಿತಿ ನೀಡಲು ನಿರ್ದೇಶಕ ಪ್ರೇಮ್ ತಂಡ ಜೊತೆಯಾಗಿತ್ತು, ಈ ವೇಳೆನಟ ದ್ರುವ ಸರ್ಜಾ, ನಾಯಕಿ ರೀಶ್ಮಾ ನಾಣಯ್ಯ ಭಾಗಿಯಾಗಿದ್ದರು
ಕಿಚ್ಚ ಸುದೀಪ್ ಮಾತನಾಡಿ, ಕೆಡಿ ಚಿತ್ರದಲ್ಲಿ ಪಾತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. 150 ದಿನಗಳ ಕಾಲ ನಡೆದ
ಚಿತ್ರೀಕರಣದಲ್ಲಿ ನನ್ನದು ಮೂರು ದಿನದ ಕೆಲಸ ಮಾತ್ರ. ದ್ರುವ ನನ್ನ ಸೋದರನಿದ್ದಂತೆ, ಆತ ದೊಡ್ಡ ಸಿನಿಮಾ ಮಾಡಿದಾಗ, ಅದರ ಭಾಗವಾಗಿ ನಿಲ್ಲಬೇಕೆಂದು ನಾನಿಲ್ಲಿಗೆ ಬಂದೆ. ನಾಯಕಿ ರೀಶ್ಮಾ ಕೂಡ ಉತ್ತಮ ನಟಿ ಎಂದು ಪ್ರಶಂಸಿದರು
ರ್ದೇಶಕ ಪ್ರೇಮ್ ಒಬ್ಬ ಫ್ಯಾಷನೇಟ್ ಫಿಲಂ ಮೇಕರ್, ಆಗು ಹೋಗುಗಳ ಬಗ್ಗೆ ಒಂದೊಳ್ಳೇ ಸಿನಿಮಾ ಕೊಡಲು ಪ್ರಯತ್ನಿಸುತ್ತಾರೆ, ಅವರು ತೆಗೆದಿರುವ ಪ್ರತಿ ಫ್ರೇಮ್ ತುಂಬಾ ಇಷ್ಟವಾಯ್ತು. ಪ್ರೇಮ್ ನನಗೆ ಒಬ್ಬ ವ್ಯಕ್ತಿಯಾಗಿ ಇಷ್ಟ, ನಾವು ಇಷ್ಟಪಟ್ಟವರಿಗಾಗಿ ಏನು ಬೇಕಾದರೂ ಮಾಡಲು ಸಿದ್ದ ಎಂದರು

ದ್ರುವ ಸರ್ಜಾ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ, ಅವರೇ ಪೈರಸಿ ಆಗದಂತೆ ನೋಡಿಕೊಳ್ಳುತ್ತಾರೆ, ಅದನ್ನೂ ಮೀರಿ ನಮಗೆ ಚಿತ್ರಮಂದಿರ ದೇವಾಲಯವಿದ್ದಂತೆ, ದೇವರನ್ನು ನೋಡಲು ದೇವಸ್ಥಾನಕ್ಕೆ ಬರಬೇಕು, ಹಾಗೇ ನಮ್ಮ ಮೇಲೆ ಪ್ರೀತಿಯಿರುವವರು ಥೇಟರಿಗೆ ಬಂದೇ ಬರುತ್ತಾರೆ ಎಂದು ಪ್ರೇಕ್ಷಕರ ಮೇಲೆ ನಂಬಿಕೆ ವ್ಯಕ್ತಪಡಿಸಿದರು,
ನಿರ್ದೇಶಕ ಜೋಗಿ ಪ್ರೇಮ್ ಮಾತನಾಡಿ ಸುದೀಪ್ ಅವರು ನನಗೆ ಬ್ರದರ್ ಥರ, ನನ್ನ ಬಗ್ಗೆ ಯಾವುದೇ ವಿವಾದ ಆಗಲಿ ಸದಾ ಬೆಂಬಲಕ್ಕೆ ನಿಲ್ತಾರೆ, ಈ ಸಿನಿಮಾದಲ್ಲಿ ಒಂದು ಪವರ್ ಫುಲ್ ಪಾತ್ರವಿದೆ ನೀವು ಮಾಡಬೇಕು ಎಂದು ಅವರನ್ನು ಕೇಳಿದಾಗ ಒಂದೇ ಮಾತಿಗೆ ಆಯ್ತು ಬರತೀನಿ ಅಂದರು, ಚಿತ್ರದಲ್ಲಿ ಅವರು ಕಾಲಭೈರವನಾಗಿ ಅಬ್ಬರಿಸಿದ್ದಾರೆ. ಅವರ ಪಾತ್ರ ತುಂಬಾ ವೈಲೆಂಟ್ ಆಗಿದೆ, ಅದು ಎಷ್ಟು ಪವರ್ ಫುಲ್ ಅಂತ ನೀವೆಲ್ಲ ಸಿನಿಮಾ ನೋಡಿದಾಗ ಗೊತ್ತಾಗುತ್ತೆ ಎಂದರು.

ನಾಯಕ ದ್ರುವ ಸರ್ಜಾ, ನಾಯಕಿ ರೀಶ್ಮಾ ನಾಣಯ್ಯ ತಮ್ಮ ಪಾತ್ರಗಳ ಕುರಿತಂತೆ ಹಾಗೂ ಚಿತ್ರದಲ್ಲಿ ಸಂಜಯದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಇವರೆಲ್ಲ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ.

