Veteran actor Shivarajkumar plays a lawyer in the film "Mahaan".

“ಮಹಾನ್” ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಹಿರಿಯ ನಟ ಶಿವರಾಜಕುಮಾರ್ - CineNewsKannada.com

“ಮಹಾನ್” ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಹಿರಿಯ ನಟ ಶಿವರಾಜಕುಮಾರ್

ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ “ಮಹಾನ್” ಚಿತ್ರದ ವಿಶೇಷಪಾತ್ರದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಅಭಿನಯಿಸಿದ್ದು ಚಿತ್ರದಲ್ಲಿ ಕರಿ ಕೋಟು ತೊಟ್ಟು ವಕೀಲರಾಗಿದ್ದಾರೆ

ವಿಜಯ್ ರಾಘವೇಂದ್ರ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಬಹಳ ವರ್ಷಗಳ ನಂತರ ಶಿವರಾಜಕುಮಾರ್ ಹಾಗೂ ವಿಜಯ ರಾಘವೇಂದ್ರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ಮಹಾನ್” ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಮುಖ್ಯ ಪಾತ್ರಗಳಾಗಿರುತ್ತದೆ. ಮನೆಯಲ್ಲಿ ನಾವೇನಾದರೂ ತಪ್ಪು ಮಾಡಿದರೆ, ನಮಗೆ ಬುದ್ದಿ ಹೇಳಲು ತಂದೆ – ತಾಯಿ ಇರುತ್ತಾರೆ. ಅಂತಹುದೇ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾದಾಗ ಅಲ್ಲಿನ ತೊಂದರೆಗಳನ್ನು ತಿದ್ದಲು “ಮಹಾನ್” ವ್ಯಕ್ತಿಯ ಅಗತ್ಯವಿರುತ್ತದೆ. ಅಂತಹ “ಮಹಾನ್” ವ್ಯಕ್ತಿಯ ಪಾತ್ರದಲ್ಲಿ ಡಾಶಿವರಾಜಕುಮಾರ್ ಅಭಿನಯಿಸಿದ್ದಾರೆ.

ನಿರ್ದೇಶಕ ಪಿ.ಸಿ.ಶೇಖರ್ ಮಾಹಿತಿ ನೀಡಿ “ಮಹಾನ್” ಚಿತ್ರದಲ್ಲಿ ಹಿರಿಯ ವಕೀಲರಾಗಿ ಶಿವರಾಜಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಪಾತ್ರ ತುಂಬಾ ಪ್ರಮುಖವಾದದ್ದು. ಎಲ್ಲಾ ನಿರ್ದೇಶಕರಿಗೂ ಶಿವರಾಜಕುಮಾರ್ ಚಿತ್ರ ನಿರ್ದೇಶನ ಮಾಡುವ ಆಸೆ ಇರುತ್ತದೆ. ನನಗೂ ಅದು ಬಹಳ ದಿನಗಳ ಹಂಬಲ. ಆ ಆಸೆ ಈಗ ಈಡೇರಿದೆ. ಶಿವರಾಜಕುಮಾರ್ ಅವರ ಅಭಿನಯ ಪ್ರಕಾಶ್ ಬುದ್ದೂರು ಅವರಿಗು ತುಂಬಾ ಸಂತೋಷ ತಂದಿದೆ. ಇಡೀ “ಮಹಾನ್” ಚಿತ್ರತಂಡ ಶಿವರಾಜಕುಮಾರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ. .

“ಮಹಾನ್” ಬಹು ತಾರಾಬಳಗದ ಚಿತ್ರವಾಗಿದ್ದು, ಡಾ.ಶಿವರಾಜಕುಮಾರ್, ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಸಹ ಆಭಿನಯಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin