The first schedule of the film "Tenali" starring actor Komal has been completed.

ನಟ ಕೋಮಲ್ ನಟನೆಯ “ತೆನಾಲಿ” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ - CineNewsKannada.com

ನಟ ಕೋಮಲ್ ನಟನೆಯ “ತೆನಾಲಿ” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

ನಟ ಕೋಮಲ್ ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜುಲೈ 4 ಅವರ ಹುಟ್ಟುಹಬ್ಬವನ್ನು ತೆನಾಲಿ ಚಿತ್ರತಂಡದೊಂದಿಗೆ ಆಚರಿಸಿಕೊಂಡಿದ್ದಾರೆ. …ನಿರ್ದೇಶಕ ಸಿದ್ವಿನ್ ದ್ರುವ್ ಆಕ್ಷನ್ ಕಟ್ ಹೇಳುತ್ತಿರುವ ತೆನಾಲಿ ಚಿತ್ರ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ

ಸಾಕಷ್ಟು ವರ್ಷಗಳಿಂದ ಸಿನಿಮಾಗಳ ಮೂಲಕ ಜನರನ್ನು ರಂಜಿಸುತ್ತಾ ಬಂದಿರುವ ಕೋಮಲ್ ಈ ವರ್ಷದ ಹುಟ್ಟುಹಬ್ಬವನ್ನ ಸಖತ್ ಸಿಂಪಲ್ ಆಗಿ ಆಚರಣೆ ಮಾಡಿಕೊಂಡಿದ್ದಾರೆ. ತೆನಾಲಿ ಸಿನಿಮಾತಂಡ ಕೋಮಲ್ ಅವರ ಮನೆಗೆ ಭೇಟಿ ನೀಡಿ ಕೇಕ್ ಕತ್ತರಿಸೋ ಮೂಲಕ ಕೋಮಲ್ ಕುಮಾರ್ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಿದೆ.

ತೆನಾಲಿ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು ಎರಡನೇ ಹಂತದ ಚಿತ್ರೀಕರಣಕ್ಕೆ ಸಿದ್ದವಾಗಿದೆ… ತೆನಾಲಿ ಸಿನಿಮಾದಲ್ಲಿ ಕಾಜಲ್ ಕುಂದರ್ ಹಾಗೂ ಅಕ್ಷಿತಾ ಬೋಪಯ್ಯ ನಾಯಕಿಯರಾಗಿ ಕಾಣಿಸಿಕೊಳ್ತಿದ್ದಾರೆ.

ಚಿತ್ರಕ್ಕೆ ನಿರ್ದೇಶಕ ಸಿದ್ದ್ರುವ್ ಸಿದ್ದು ಸೇರಿದಂತೆ ಸಂತೋಷ್ ಮಾಯಪ್ಪ, ಪ್ರದೀಪ್ ಕುಮಾರ್ ಮಹಾಲಿಂಗಯ್ಯ, ರೇಣುಕಾ ಪ್ರಸಾದ್ ಬಂಡವಾಳ ಹಾಕಿದ್ದಾರೆ. ರಿತ್ವಿಕ್ ಮುರಳಿಧರನ್ ಸಂಗೀತ ನಿರ್ದೇಶನ ಮಾಡುತ್ತಿದ್ದು ಉದಯ್ ಲೀಲಾ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin