ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಯುವ ನಟಿ ಇಶಾ ಲಂಕೇಶ್ ಆಗಮನಕ್ಕೆ ವೇದಿಕೆ
ಖ್ಯಾತ ಪತ್ರಕರ್ತ, ಲೇಖಕ ಪಿ.ಲಂಕೇಶ್ ಮೊಮ್ಮಗಳು, ನಿರ್ದೇಶಕಿ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಕುಟುಂಬದ ಕುಡಿ ಆಗಮನಕ್ಕೆ ವೇದಿಕೆ ಸಜ್ಜಾಗಿದೆ

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ನವಿಶಾ ಫಿಲಂಸ್ ಲಾಂಛನದಲ್ಲಿ ಶಿವರಾಜ್ ಕನಗನಪಲ್ಲಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರವಾಗಿದೆ.
ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವತಯಾರಿಗಳನ್ನು ಮಾಡಿಕೊಂಡಿದ್ದಾರೆ. ಸಾಕಷ್ಟು ಸದಭಿರುಚಿಯ ಚಿತ್ರ ನಿರ್ದೇಶಿಸಿರುವ ಪ್ರೀತಂ ಗುಬ್ಬಿ ನಿರ್ದೇಶನ ಹಾಗೂ ಇಶಾ ಲಂಕೇಶ್ ಚೊಚ್ಚಲ ಅಭಿನಯದ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆ ಇದೆ.

ಸದ್ಯ ಇನ್ನೂ ಹೆಸರಿಡದ ಈ ನೂತನ ಚಿತ್ರದ ನಾಯಕಿಯ ಕುರಿತಾಗಿ ಮಾತ್ರ ತಿಳಿಸಿರುವ ನಿರ್ದೇಶಕ ಪ್ರೀತಂ ಗುಬ್ಬಿ, ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.


