Muhurat for Pan India film 'Paradox': Actress Hansika Motwani returns

ಪ್ಯಾನ್ ಇಂಡಿಯಾ ‘ಪ್ಯಾರಾಡಾಕ್ಸ್’ ಚಿತ್ರಕ್ಕೆ ಮುಹೂರ್ತ : ಮರಳಿ ಬಂದ ನಟಿ ಹನ್ಸಿಕಾ ಮೋಟ್ವಾನಿ - CineNewsKannada.com

ಪ್ಯಾನ್ ಇಂಡಿಯಾ ‘ಪ್ಯಾರಾಡಾಕ್ಸ್’ ಚಿತ್ರಕ್ಕೆ ಮುಹೂರ್ತ : ಮರಳಿ ಬಂದ ನಟಿ ಹನ್ಸಿಕಾ ಮೋಟ್ವಾನಿ

ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿರುವ ಕ್ಯಾಪ್ಟನ್ ಕಿಶೋರ್ ಈಗ ನಿರ್ದೇಶಕರಾಗಿದ್ದಾರೆ. ಅದುವೇ ‘ಪ್ಯಾರಾಡಾಕ್ಸ್’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಪ್ರಮುಖ ಪಾತ್ರದಲ್ಲಿ ಬಹು ಭಾಷಾ ನಟಿ ಹನ್ಸಿಕಾ ಮೊಟ್ವಾನಿ ಅಭಿನಯ ಮಾಡುತ್ತಿದ್ದಾರೆ.

ಚಿತ್ರದ ಮುಹೂರ್ತ ಕಾರ್ಯಕ್ರಮಕ್ಕೆ ನೃತ್ಯನಿರ್ದೇಶಕರಾದ ಮುರಳಿ ಮಾಸ್ಟರ್, ಗಣೇಶ್ ಮಾಸ್ಟರ್, ರಾಮು ಮಾಸ್ಟರ್ ಸೇರಿದಂತೆ ಹಲವು ನೃತ್ಯ ನಿರ್ದೇಶಕರುಗಳು ಆಗಮಿಸಿ, ಕಿಶೋರ್ ಚಿತ್ರಕ್ಕೆ ಶುಭ ಹಾರೈಸಿದರು.

ನಿರ್ದೇಶಕ ಕ್ಯಾಪ್ಟನ್ ಕಿಶೋರ್ ಮಾತನಾಡಿ ಅಂಗಾಂಗ ಕಳ್ಳತನ ಬಗ್ಗೆ ಸಿನಿಮಾ ಇರಲಿದ್ದು, ಮಹಿಳಾ ಪ್ರಧಾನ ಕಥೆ ಒಳಗೊಂಡಿದೆ. ಇಂಗ್ಲೀಷ್ ಸಿನಿಮಾ ತರಾ ಚಿತ್ರಕಥೆ ಇರಲಿದ್ದು ಸಸ್ಪೆನ್ಸ್, ಥ್ರಿಲ್ಲರ್ ಜಾನರ್ ಚಿತ್ರವಿದು. ನಿರ್ದೇಶಕನಾಗಬೇಕು ಎಂದು ಚಿತ್ರರಂಗಕ್ಕೆ ಬಂದಿದ್ದೆ. ಚಿಕ್ಕಪ್ಪನಿಂದಾಗಿ ನೃತ್ಯ ನಿರ್ದೇಶಕನಾದೆ. ಒಂದಿಷ್ಟು ನಿರ್ದೇಶಕರ ಜೊತೆ ಕೆಲಸ ಮಾಡಿದ್ದು, ಈಗ ‘ಪ್ಯಾರಾಡಾಕ್ಸ್’ ಸ್ವತಂತ್ರ ನಿರ್ದೇಶನ ಮಾಡುತ್ತಿದ್ದೇನೆ ಎಂದಿದ್ಧಾರೆ

ಕಾರ್ತಿಕ್ ರೆಡ್ಡಿ ಚಿತ್ರ ನಿರ್ಮಾಣ ಮಾಡಿದ್ದು ಸೋನು ಸೋದ್, ಹನ್ಸಿಕಾ ಮೊಟ್ವಾನಿ, ರವಿಶಂಕರ್ ಸೇರಿದಂತೆ ಬೇರೆ ಬೇರೆ ಭಾಷೆಯ ಹಲವು ಕಲಾವಿದರು ಇದರಲ್ಲಿ ಅಭಿನಯ ಮಾಡಲಿದ್ದಾರೆ’ ಎಂದು ಹೇಳಿದ್ದಾರೆ

ನಿರ್ಮಾಪಕ ಕಾರ್ತಿಕ್ ರೆಡ್ಡಿ ಮಾತನಾಡಿ, ಎಲ್ಲಾ ಭಾಷೆಗೂ ಹತ್ತಿರವಾಗುವ ಕಥೆ ಇದೆ. ಪ್ರೇಕ್ಷಕರಿಗೆ ಹೊಸ ಅನುಭವ ಚಿತ್ರ ನೀಡುತ್ತದೆ. ತಾಂತ್ರಿಕವಾಗಿ ಸಿನಿಮಾ ತುಂಬಾ ಚೆನ್ನಾಗಿ ಬರಲಿದೆ. £ ಮೊದಲ ನಿರ್ಮಾಣದ ‘ಶ್ಯಾಡೊ’ ಇಂಗ್ಲಿಷ್ ಸಿನಿಮಾ ಮುಕ್ತಾಯದ ಹಂತದಲ್ಲಿದೆ. ‘ಪ್ಯಾರಾಡಾಕ್ಸ್’ ಚಿತ್ರವನ್ನು ಹಾಲಿವುಡ್ ಸಿನಿಮಾದಂತೆ ಮಾಡುವ ಯೋಚನೆಯಿದ್ದು ಬೇರೆ ಬೇರೆ ಭಾಷೆಯ 16 ಮುಖ್ಯ ಕಲಾವಿದರು ಈ ಚಿತ್ರದಲ್ಲಿರುತ್ತಾರೆ’ ಎಂದರು

ಹೆಸರಾಂತ ಸಾಹಸ ನಿರ್ದೇಶಕ ರವಿವರ್ಮ ಮಾತನಾಡಿ, ನಿರ್ದೇಶಕರು ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿ ಐದು ಭರ್ಜರಿ ಸಾಹಸ ಸನ್ನಿವೇಶಗಳಿದ್ದು, ಅದ್ದೂರಿಯಾಗಿ ಮೂಡಿ ಬರಲಿದೆ ಎಂದು ಹೇಳಿದರು

ಚಿತ್ರಕ್ಕೆ ಸಾಯಿರಾಮ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಚಿತ್ರಕ್ಕೆ ರವಿವರ್ಮ ಅವರ ಸಾಹಸ ನಿರ್ದೇಶನ, ರಾಜು ಛಾಯಾಗ್ರಹಣ, ದೀಪಕ್ ಸಂಕಲನ ಇರಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin