“ರೋಲೆಕ್ಸ್” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ
ಅಂಬಟಿ ಮಧು ಮೋಹನ್ ನಿರ್ಮಿಸಿ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ರೋಲೆಕ್ಸ್” ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ

ನಿರ್ದೇಶಕ ಶ್ರೀನಿವಾಸ್ ಮಂಡ್ಯ ಮಾಹಿತಿ ನೀಡಿ, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಚಿತ್ರವನ್ನು ಯಾವುದೇ ವಯಸ್ಸಿನ ಮಿತಿಯಿಲ್ಲದೆ ಪ್ರತಿಯೊಬ್ಬರು ಕುಟುಂಬ ಸಮೇತ ನೋಡಬಹುದು. ಚಿತ್ರದಲ್ಲಿ ಮನೋರಂಜನೆಯ ಪ್ರಧಾನ. ನೋಡುಗರಿಗೆ ಇದೊಂದು ನಗೆಯ ಹಬ್ಬ. ಈ ಚಿತ್ರದ ಕೋಮಲ್ ಕುಮಾರ್ ಅವರ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸೋನಾಲ್ ಮೊಂತೆರೊ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ ಎಂದಿದ್ದಾರೆ

ವಿಶೇಷಪಾತ್ರದಲ್ಲಿ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದು ತಿಳಿಸಿದ್ದಾರೆ.
ನಾಲ್ಕು ಹಾಡುಗಳಿರುವ ಚಿತ್ರಕ್ಕೆ ಜೆಸ್ಟ್ ಗಿಫ್ಟ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನವಿರುವ ಚಿತ್ರಕ್ಕೆ ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಹಾಗೂ ಮುರಳಿಕೃಷ್ಣ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.


