“ಪರಂವಃ”ಚಿತ್ರದ ಮೂರನೇ ಹಾಡು ಬಿಡುಗಡೆ: ಎಚ್ ಡಿಕೆ ,ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾರೈಕೆ
ಯುವ ಪ್ರತಿಭಾವಂತರು ಸೇರಿ ನಿರ್ಮಾಣ ಮಾಡಿರುವ “ಪರಂವಃ” ಚಿತ್ರದ ಮೂರನೇ ಹಾಡನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಪೀಪಲ್ ವಲ್ರ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್ ರವರು ಹಾಡನ್ನು ಮೆಚ್ಚಿ,ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.

ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳಿಗೆ ಮಾಧ್ಯಮ ಮಿತ್ರರಾದ ನೀವುಗಳು ಪ್ರೀತಿಯಿಂದ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಿದಂತೆ ಈ ಹಾಡನ್ನು ಸಹ ಹೆಚ್ಚಿನ ಹೃದಯಗಳಿಗೆ ತಲುಪಿಸಲು ಸಹಕರಿಸಬೇಕೆಂದು ಚಿತ್ರತಂಡ ವಿನಂತಿ ಮಾಡಿದೆ.

