The team of "Bhairya KA-07" paid homage to Sri Muthyalamma

ಶ್ರೀ ಮುತ್ಯಾಲಮ್ಮನಿಗೆ ಪೂಜೆ ಸಲ್ಲಿಸಿದ “ಭೈರ್ಯ ಕೆಎ-07” ಚಿತ್ರತಂಡ - CineNewsKannada.com

ಶ್ರೀ ಮುತ್ಯಾಲಮ್ಮನಿಗೆ ಪೂಜೆ ಸಲ್ಲಿಸಿದ “ಭೈರ್ಯ ಕೆಎ-07” ಚಿತ್ರತಂಡ

‘ಭೈರ್ಯ ಕೆಎ-07’ ಚಿತ್ರದ ಮೂಲಕ ಗೌರಿಬಿದನೂರಿನ ರೋಷನ್ ಕಥೆ,ಚಿತ್ರಕಥೆ ಬರೆದು ಮೊದಲ ಬಾರಿ ನಾಯಕನಾಗಿ ನಟಿಸುತ್ತಿದ್ದಾರೆ. ರಾಜೀವ್ ಚಂದ್ರಕಾಂತ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡ ಪ್ರೇಮಿ ಬಾಗಲಕೋಟೆಯ ಷರೀಫ ಬೇಗಂ ನಡಾಫ್, ಎನ್ಜಿಓ ಸಂಘ ನಡೆಸುತ್ತಿದ್ದು, ಸಾಧನೆ ಮಾಡುವ ಸಲುವಾಗಿ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಚಿತ್ರದ ಮಹತ್ವದ ಸನ್ನಿವೇಶದ ಸಲುವಾಗಿ ಹೊಸಮನೆ ಮೂರ್ತಿ ಸಾರಥ್ಯದಲ್ಲಿ ‘ಹೆಚ್‍ಎಂಟಿ’ಯಲ್ಲಿ ಸೆಟ್ ಹಾಕಲಾಗುತ್ತಿದೆ. ಇದರಲ್ಲಿ ಹಿರಿಯ ಕಲಾವಿದರುಗಳು ಭಾಗವಹಿಸಲಿದ್ದಾರೆ. ಚಿತ್ರೀಕರಣಕ್ಕೆ ಹೋಗುವ ಮುನ್ನ ಧರ್ನುಮಾಸದ ಮೊದಲನೆ ಶುಭ ದಿನದಂದು ಗ್ರಾಮದೇವತೆ ಶ್ರೀ ಮುತ್ಯಾಲಮ್ಮನ ದೇವಸ್ಥಾನದಲ್ಲಿ ತಂಡವು ಸರಳವಾಗಿ ಪೂಜೆ ಆಚರಿಸಿಕೊಂಡಿದೆ. ನಟ,ನಿರ್ದೇಶಕ ಗಡ್ಡವಿಜಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದ್ದಾರೆ.

ನಟ ರೋಷನ್ ಕುರಿತು ಹೇಳುವುದಾದರೆ, ಭರತನಾಟ್ಯ ಪ್ರವೀಣ, ಮುಂಬೈನಲ್ಲಿ ನಟನೆ ತರಭೇತಿ ಪಡೆದುಕೊಂಡು ಬಂದಿದ್ದಾರೆ. ಮುಂದೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯಾಗಿ, ಸ್ಕ್ರಿಪ್ಟ್ ಬರೆದುಕೊಂಡು ಹಲವು ಚಿತ್ರಗಳಿಗೆ ಸೆಟ್ ಕೆಲಸ ನಿರ್ವಹಿಸಿ, ಮಧ್ಯೆ ‘ತಲ್ವಾರ್’ ಕಿರುಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದೆಲ್ಲಾ ಅನುಭವದಿಂದ ಈಗ ಹೊಸ ಅನುಭವ ಎನ್ನುವಂತೆ ಹೀರೋ ಆಗಿ ಪರಿಚಯವಾಗುತ್ತಿದ್ದಾರೆ.

ಭೂಗತ ಲೋಕದ ಕಥೆಯಲ್ಲಿ ನಾಯಕನ ಹೆಸರು ಶೀರ್ಷಿಕೆಯಾಗಿರುತ್ತದೆ. ಬೆಂಗಳೂರಿನ ಡಾನ್ಗಳ ಕುರಿತಂತೆ ಸಾಕಷ್ಟು ಸಿನಿಮಾಗಳು ಬಂದಿವೆ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಚಿಂತಾಮಣಿ, ಶಿಡ್ಲಘಟ್ಟವನ್ನು ಜನರು ಮರೆತು ಹೋಗಿದ್ದಾರೆ. ಕೆಜಿಎಫ್ದಲ್ಲಿರುವ ಚಿನ್ನದ ಗಣಿಯನ್ನು ರಕ್ಷಣೆ ಮಾಡಿದವರು ಯಾರು ಅಂದು ಅಧ್ಯಕ್ಷರಾಗಿದ್ದವರು ಯಾರು ಇವತ್ತಿನವರೆಗೂ ಅದು ಯಾಕೆ ಸರ್ಕಾರದ ಅಧೀನದಲ್ಲಿಲ್ಲ ಇಂತಹ ಎಲ್ಲಾ ರೀತಿಯ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ.

ಇಷ್ಟೆಲ್ಲಾ ವಿಷಯಗಳನ್ನು ಸಂಶೋಧನೆ ನಡೆಸಿ, ಅಧ್ಯಯನ ಮಾಡಿ ಚಿತ್ರಕಥೆಯನ್ನು ತಂಡದೊಂದಿಗೆ ಸೇರಿಕೊಂಡು ಸಿದ್ದಪಡಿಸಲಾಗಿದೆ. 1970 ರಿಂದ 1985ರ ತನಕ ಸಿನಿಮಾವು ಸಾಗುತ್ತದೆ.

ಇನ್ನುಳಿದಂತೆ ನಾಯಕಿ, ಹಿರಿಯ ಪೆÇೀಷಕ ಕಲಾವಿದರು, ಹೆಸರಾಂತ ತಂತ್ರಜ್ಘರು ಚಿತ್ರದಲ್ಲಿ ಇದ್ದಾರೆ. ಇವೆಲ್ಲಾ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ನಿರ್ದೇಶಕರು ಹೇಳಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin