ನಟ ವಿಜಯ್ ಸೇತುಪತಿ ಹುಟ್ಟುಹಬ್ಬಕ್ಕೆ ಸಿಹಿಸುದ್ದಿ ಕೊಟ್ಟ ನಿರ್ದೇಶಕ ಪುರಿ ಜಗನ್ನಾಥ್
ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಜೋಡಿಯ ಹೊಸ ಸಿನಿಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ವಿಜಯ್ ಸೇತುಪತಿ ಹುಟ್ಟುಹಬ್ಬದ ವಿಶೇಷವಾಗಿ ಶೀರ್ಷಿಕೆ ಬಿಡುಗಡೆ ಮಾಡಲಾಗಿದೆ. “ಸ್ಲಂಡಾಗ್-33 ಟೆಂಪಲ್ ರೋಡ್ ” ಎಂದು ಹೆಸರಿಡಲಾಗಿದೆ

ಶೀರ್ಷಿಕೆ ಜೊತೆಗೆ ಚಿತ್ರತಂಡ ವಿಜಯ್ ಸೇತುಪತಿ ಅವರ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ. ಕೈಯಲ್ಲಿ ರಕ್ತಸಿಕ್ತ ಕತ್ತಿ ಹಿಡಿದು, ಹರಿದ ಬಟ್ಟೆ ತೊಟ್ಟು ಹೊಸ ಅವತಾರದಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ.
ಮಾಸ್ ಆಕ್ಷನ್ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಸಂಯುಕ್ತ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಕುಮಾರ್, ಟಬು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬ್ರಹ್ಮನಂದ್ ಹಾಗೂ ವಿಟಿವಿ ಗಣೇಶ್ ಕೂಡ ತಾರಾಬಳಗದಲ್ಲಿದ್ದಾರೆ.
ಪುರಿ ಜಗನ್ನಾಥ್ ತಮ್ಮದೇ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಜೆಬಿ ನಾರಾಯಣ್ ರಾವ್ ಕೊಂಡ್ರೊಲ್ಲಾ ಅವರ ಸಹಯೋಗದಲ್ಲಿ ಚಾರ್ಮಿ ಕೌರ್ ಈ ಚಿತ್ರ ಪ್ರಸ್ತುತಪಡಿಸುತ್ತಿದ್ದಾರೆ.

ಅರ್ಜುನ್ ರೆಡ್ಡಿ, ಅನಿಮಲ್ ಚಿತ್ರಗಳಿಗೆ ಸಂಗೀತ ಒದಗಿಸಿರುವ ಹರ್ಷವರ್ದನ್ ರಾಮೇಶ್ವರ್ ಚಿತ್ರಕ್ಕೂ ಮ್ಯೂಸಿಕ್ ನೀಡಿದ್ದಾರೆ.
ಈ ಪ್ಯಾನ್-ಇಂಡಿಯಾ ಸಿನಿಮಾ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ

