ಆಗಸ್ಟ್ 15ಕ್ಕೆ ‘ಡಬಲ್ ಇಸ್ಮಾರ್ಟ್’ ಸಿನಿಮಾ ಧಮಾಕ…
ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ `ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ಡಬಲ್ ಇಸ್ಮಾರ್ಟ್ ಚಿತ್ರ ತೆರೆಗೆ ಬರಲಿದೆ.
ದಕ್ಷಿಣ ಭಾರತದ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು `ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.
ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಡಬಲ್ ಇಸ್ಮಾರ್ಟ್' ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾ ನಿರ್ಮಿಸಿದ್ದಾರೆ.
ಈ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‍ನಲ್ಲಿ ಈಗಲೇ ಒಂದು ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.