Under Water song shot in the movie For Regn starring Pruthwi Amber
‘F0R REGN’ ನಲ್ಲಿ ಅಂಡರ್ ವಾಟರ್ ಸಾಂಗು
ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಹಾಡೊಂದರ ಚಿತ್ರೀಕರಣದೊಂದಿಗೆ ಮುಕ್ತಾಯವಾಗಿದೆ. ಅಂಡರ್ ವಾಟರ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.
ಈ ಹಾಡಿನ ಚಿತ್ರೀಕರಣಕ್ಕಾಗಿ ” “ಮೋಕೊ ಬೋಟ್” ಕ್ಯಾಮರಾ ಬಳಸಲಾಗಿದೆ. ನನಗೆ ತಿಳಿದ ಕನ್ನಡ ಚಿತ್ರರಂಗದಲ್ಲಿ ಹಾಡೊಂದರ ಚಿತ್ರೀಕರಣಕ್ಕಾಗಿ ಈ ಕ್ಯಾಮೆರಾ ಬಳಸಿರುವುದು ಇದೇ ಮೊದಲು ಎನ್ನುತ್ತಾರೆ ನಿರ್ದೇಶಕ ನವೀನ್ ದ್ವಾರಕನಾಥ್. ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು ಈ ಹಾಡನ್ನು ಅದ್ಭುತವಾಗಿ ಸೆರೆ ಹಿಡಿದಿದ್ದಾರೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನವಿರುವ ಈ ಹಾಡಿನಲ್ಲಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯಿಸಿದ್ದಾರೆ.
ಇತ್ತೀಚಿಗೆ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲಿ ಈ ಚಿತ್ರ(2023 ರ ಫೆಬ್ರವರಿ 10) ತೆರೆಗೆ ಬರುತ್ತಿದೆ