ಕಣ್ಣಪ್ಪ ಚಇತ್ರ ಏಪ್ರಿಲ್ 25ರ ಬದಲು ಜೂನ್ 27ಕ್ಕೆ ಬಿಡುಗಡೆ

ತೆಲುಗಿನ ಖ್ಯಾತ ಡಾ. ಮೋಹನ್ ಬಾಬು ಮತ್ತು ಅವರ ಮಗ ವಿಷ್ಣು ಮಂಚು ಕನಸಿನ ಕೂಸು “ಕಣ್ಣಪ್ಪ”. ಏಪ್ರಿಲ್ 25ರ ಬದಲು ಜೂನ್ 27 ರಂದು ತೆರೆಗೆ ಬರಲಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇದೇ ತಿಂಗಳ ಕೊನೆಯವಾಗ ತೆರೆಗೆ ಬರಬೇಕಾಗಿತ್ತು. ತಾಂತ್ರಿಕ ಕೆಲಸದಿಂದ ಚಿತ್ರ ಬಿಡುಗಡೆ ಮುಂದೂಡಲಾಗಿದೆ

ಜೂನ್ 27ರಂದು ಜಗತ್ತಿನಾದ್ಯಂತ ಪ್ಯಾನ್ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.ಇದೊಂದು ಬರೀ ಚಿತ್ರವಾಗದೆ ಒಂದು ಅಭೂತಪೂರ್ವ ಅನುಭವವಾಗಬೇಕು ಎಂಬ ನಿಟ್ಟಿನಲ್ಲಿ ಹಗಲು ರಾತ್ರಿ ಶ್ರಮಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಚಿತ್ರ ಅದ್ಭುತವಾಗಿ ಮೂಡಿಬಂದಿದ್ದು, ಪ್ರೇಕ್ಷಕರ ನಿರೀಕ್ಷೆಗೆ ತಕ್ಕ ಹಾಗೆ ನಿಲುಕಲಿದೆ ಎಂದು ಚಿತ್ರತಂಡ ನಂಬಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಡಾ. ಮೋಹನ್ ಬಾಬು, ವಿಷ್ಣು ಮಂಚು, ಪ್ರಭುದೇವ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ವಿನಯ್ ಮಹೇಶ್ವರಿ ಹಾಜರಿದ್ದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿರುವ ಯೋಗಿ ಆದಿತ್ಯನಾಥ್, ಚಿತ್ರ ದೇಶಾದ್ಯಂತ ಜನರಿಗೆ ಇಷ್ಟವಾಗಲಿದೆ ಎಂದು ನಂಬಿಕೆ ವ್ಯಕ್ತಪಡಿಸಿದ್ದಾರೆ. ಆದಿತ್ಯನಾಥ್ ಅವರ ಶುಭ ಹಾರೈಕೆಗಳಿಂದ ಚಿತ್ರತಂಡ ಖುಷಿಯಾಗಿದ್ದು, ಉತ್ಸಾಹವನ್ನು ಇಮ್ಮಡಿಗೊಳಿಸಿದೆ.

ಎ.ವಿ.ಎ. ಎಂಟರ್ಟೈನ್ಮೆಂಟ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಅಡಿ ಡಾ. ಮೋಹನ್ ಬಾಬು ನಿರ್ಮಿಸಿರುವ `ಕಣ್ಣಪ್ಪ’ ಚಿತ್ರವನ್ನು ಮುಕೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡಿದ್ದಾರೆ. ಇದುವರೆಗೂ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಪೋಸ್ಟರ್ ಮತ್ತು ಹಾಡುಗಳು ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮತ್ತು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಬಿಡುಗಡೆಯ ದಿನಾಂಕ ಹತ್ತಿರವಾಗುತ್ತಿದ್ದಂತೆ, ಪ್ರಚಾರ ಕಾರ್ಯಗಳು ಸಹ ಭರದಿಂದ ಸಾಗುತ್ತಿದ್ದು, ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಆಗುವ ನಿರೀಕ್ಷೆ ಇದೆ.

`ಕಣ್ಣಪ್ಪ’ ಚಿತ್ರದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಿದ್ದು, ಡಾ. ಮೋಹನ್ ಬಾಬು, ಶರತ್ ಕುಮಾರ್, ಮಧು, ದೇವರಾಜ್, ಮುಕೇಶ್ ರಿಶಿ, ಬ್ರಹ್ಮಾನಂದಂ ಮುಂತಾದವರು ನಟಿಸಿದ್ದು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಕಾಜಲ್ ಅಗರ್ವಾಲ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಸ್ಟೀಫನ್ ದೇವಸ್ಸಿ ಸಂಗೀತವಿದ್ದು, ಶೆಲ್ಡನ್ ಚಾವ್ ಅವರ ಛಾಯಾಗ್ರಹಣವಿದೆ.

Related Posts

ರಾಮಾಯಣ ಚಿತ್ರ 1000 ಕೋಟಿ ರೂಪಾಯಿ ಗಳಿಕೆ: ಯಶ್ ಮುಡಿಗೆ ಮತ್ತೊಂದು ಐತಿಹಾಸಿಕ ದಾಖಲೆ

ನಿತೇಶ್ ತಿವಾರಿ ನಿರ್ದೇಶನದಲ್ಲಿ, ನಮಿತ್ ಮಲ್ಹೋತ್ರಾ ಹಾಗೂ ರಾಕಿಂಗ್ ಸ್ಟಾರ್ ಯಶ್ ಮಾನ್‍ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ `ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ವಿಶ್ವದಾದ್ಯಂತ 1000…

ರಜನಿಕಾಂತ್- ಕಮಲ್ ಹಾಸನ್ ಕಾಂಬಿನೇಷನ್‍ನ `ಧರ್ಮನ್’ ಚಿತ್ರದಲ್ಲಿ ನಟಿ ಶ್ರೀಲೀಲಾ

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಹಾಗೂ ಕಮಲ್ ಹಾಸನ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ ‘ಧರ್ಮನ್’ ಚಿತ್ರದ ತಾರಾಗಣ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ. ಚಿತ್ರತಂಡಕ್ಕೆ ನಟಿ ಶ್ರೀಲೀಲಾ ಪ್ರಮುಖ ಪಾತ್ರಕ್ಕಾಗಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581