Mass Maharaja Ravi Teja starrer 'Eagle' will hit the screens on January 13

ಮಾಸ್ ಮಹಾರಾಜ ರವಿತೇಜ ನಟನೆಯ `ಈಗಲ್’ ಜನವರಿ 13ಕ್ಕೆ ತೆರೆಗೆ - CineNewsKannada.com

ಮಾಸ್ ಮಹಾರಾಜ ರವಿತೇಜ ನಟನೆಯ `ಈಗಲ್’ ಜನವರಿ 13ಕ್ಕೆ ತೆರೆಗೆ

ಧಮಾಕ ಸಕ್ಸಸ್ ಬೆನ್ನಲ್ಲೇ ಮಾಸ್ ಮಹಾರಾಜ ಮತ್ತೊಮ್ಮೆ ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಛಾಯಾಗ್ರಹಕರಾಗಿದ್ದ ಕಾರ್ತಿಕ್ ಕಟ್ಟಿಮನೆ ಡೈರೆಕ್ಟರ್ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳ್ತಿರುವ `ಈಗಲ್’ ಸಿನಿಮಾದ ಸಣ್ಣ ಗ್ಲಿಂಪ್ಸ್ ಭಾರೀ ಸದ್ದು ಮಾಡಿತ್ತು. ಇದೀಗ ಈಗಲ್ ಟೀಸರ್ ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡ್ತಿದೆ.

ಫಸ್ಟ್ ಗ್ಲಿಂಪ್ಸ್ ನಲ್ಲಿ ರವಿತೇಜ ಮುಖವನ್ನು ರಿವೀಲ್ ಮಾಡದೇ ಸಸ್ಪೆನ್ಸ್ ಕಾಯ್ದುಕೊಂಡಿದ್ದ ಚಿತ್ರತಂಡ ಕುತೂಹಲಕ್ಕೆ ಬ್ರೇಕ್ ಹಾಕಿದೆ. ಮಾಸ್ ಡೈಲಾಗ್ ಹೊಡೆಯುತ್ತಾ ರಗಡ್ ಲುಕ್ ನಲ್ಲಿ ಮಾಸ್ ಮಹಾರಾಜ ಎಂಟ್ರಿ ಕೊಟ್ಟಿದ್ದು, ಅನುಪಮಾ ಪರಮೇಶ್ವರನ್, ನವದೀಪ್, ಮಧುಬಾಲ, ಕಾವ್ಯ ಥಾಪರ್ ಟೀಸರ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈಗಲ್ ಸಿನಿಮಾಗೆ ಕಾರ್ತಿಕ್ ಗಟ್ಟಿಮನ್ನಿ ನಿರ್ದೇಶನದ ಜೊತೆಗೆ ಸಂಕಲನ ಹಾಗೂ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಮಣಿಬಾಬು ಕರಣಂ ಸಂಭಾಷಣೆ, ದಾವ್ಜಂಡ್ ಟ್ಯೂನ್ ಚಿತ್ರಕ್ಕಿದೆ. ಹೈದ್ರಾಬಾದ್ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, 2024ರ ಜನವರಿ 13 ಸಂಕ್ರಾಂತಿ ಹಬ್ಬ ಸಿನಿಮಾ ತೆರೆಗೆ ಬರಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin