Victory Venkatesh-Nandamuri Kalyan Ram new movie

ವಿಕ್ಟರಿ ವೆಂಕಟೇಶ್- ನಂದಮೂರಿ ಕಲ್ಯಾಣ್ ರಾಮ್ ಹೊಸ ಸಿನಿಮಾ - CineNewsKannada.com

ವಿಕ್ಟರಿ ವೆಂಕಟೇಶ್- ನಂದಮೂರಿ ಕಲ್ಯಾಣ್ ರಾಮ್ ಹೊಸ ಸಿನಿಮಾ

ತೆಲುಗಿನ ಹಿಟ್ ಮಿಷನ್ ಎನಿಸಿಕೊಂಡಿರುವ ನಿರ್ದೇಶಕ ಅನಿಲ್ ರವಿಪುಡಿ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾ ಸೆಟ್ಟೇರಿದೆ. ವಿಕ್ಟರಿ ವೆಂಕಟೇಶ್, ನಂದಮೂರಿ ಕಲ್ಯಾಣ್ ರಾಮ್ ನಾಯಕರಾಗಿ ನಟಿಸುತ್ತಿದ್ದು, ಕೀರ್ತಿ ಸುರೇಶ್ ಮತ್ತು ಕೃತಿ ಶೆಟ್ಟಿ ನಾಯಕಿಯರಾಗಿ ಸಾಥ್ ಕೊಡ್ತಿದ್ದಾರೆ.

ನಿರ್ಮಾಪಕ ದಿಲ್ ರಾಜು ಮತ್ತು ಸಿರೀಶ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಅನಿಲ್ ರವಿಪುಡಿ ಮತ್ತು ನಿರ್ಮಾಪಕ ಸಾಹು ಗರಪತಿ ಅವರಿಗೆ ಹಸ್ತಾಂತರಿಸಿದರು. ಮುಹೂರ್ತ ಸಮಾರಂಭದಲ್ಲಿ, ವಿಕ್ಟರಿ ವೆಂಕಟೇಶ್, ಕಲ್ಯಾಣ್ ರಾಮ್, ಕೀರ್ತಿ ಸುರೇಶ್ ಮತ್ತು ಕೃತಿ ಶೆಟ್ಟಿ ನಟಿಸಿರುವ ಮೊದಲ ಶಾಟ್‍ಗೆ ಅಲ್ಲು ಅರವಿಂದ್ ಕ್ಲಾಪ್ ಮಾಡಿದರು. ಸುರೇಶ್ ಬಾಬು ಕ್ಯಾಮೆರಾ ಸ್ವಿಚ್ ಗೆ ಚಾಲನೆ ಕೊಟ್ಟರು. ಖ್ಯಾತ ನಿರ್ಮಾಪಕ ಕೆ ರಾಘವೇಂದ್ರ ರಾವ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಶೈನ್ ಸ್ಕ್ರೀನ್ಸ್ ಬ್ಯಾನರ್ ಅಡಿಯಲ್ಲಿ ಸಾಹು ಗರಪತಿ ನಿರ್ಮಿಸುತ್ತಿರುವ ಪ್ರಾಜೆಕ್ಟ್ ನ್ನು ಸುರೇಶ್ ಪ್ರೊಡಕ್ಷನ್ಸ್ ಅರ್ಚನಾ ಮತ್ತು ಜೀ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿವೆ. ಪಕ್ಕ ಕಾಮಿಡಿ ಎಂಟರ್ಟೈನರ್ ಸಿನಿಮಾ. 2027ರ ಸಂಕ್ರಾಂತಿಗೆ ಚಿತ್ರ ಬಿಡುಗಡೆಯಾಗಲಿದೆ.

ಅನುಭವಿ ತಾಂತ್ರಿಕ ವರ್ಗ ಚಿತ್ರದಲ್ಲಿದೆ. ಜಿವಿ ಪ್ರಕಾಶ್ ಕುಮಾರ್ ಸಂಗೀತ ಒದಗಿಸುತ್ತಿದ್ದು, ಸಮೀರ್ ರೆಡ್ಡಿ ಛಾಯಾಗ್ರಹಣ, ತಮ್ಮಿರಾಜು ಸಂಕಲನ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಎಎಸ್ ಪ್ರಕಾಶ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಸದ್ಯದಲ್ಲೇ ಚಿತ್ರ ಚಿತ್ರೀಕರಣ ಆರಂಭವಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin