Vijay Devarakonda- Keerthy Suresh's new movie is starting

ವಿಜಯ್ ದೇವರಕೊಂಡ- ಕೀರ್ತಿ ಸುರೇಶ್ ಜೊಡಿಯ ಹೊಸ ಸಿನಿಮಾ ಆರಂಭ - CineNewsKannada.com

ವಿಜಯ್ ದೇವರಕೊಂಡ- ಕೀರ್ತಿ ಸುರೇಶ್ ಜೊಡಿಯ ಹೊಸ ಸಿನಿಮಾ ಆರಂಭ

ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ. ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ

ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ವಾರು ರಾಣಿ ಗಾರು ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ ನಿರ್ದೇಶಕ ರವಿಕಿರಣ್ ಕೋಲಾ ಈ ಪ್ರಾಜೆಕ್ಟ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59 ನೇ ಚಿತ್ರ ಇದಾಗಿದೆ. ವಿಜಯ್ ದೇವರಕೊಂಡಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಸಾಥ್ ಕೊಡಲಿದ್ದಾರೆ. ಗ್ರಾಮೀಣ ಆಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 16 ರಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಸಿನಿಮಸ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin