Kishore's next is Selva
ಕಿಶೋರ್ ಈಗ “ಸೆಲ್ವ”.
ನಿರ್ಮಾಪಕರ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ ಚಿತ್ರದ ಶೀರ್ಷಿಕೆ
” ಜಾನ್ ಜಾನಿ ಜನಾರ್ದನ “, “ಕಾಲೇಜ್ ಕುಮಾರ್” ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಎಲ್. ಪದ್ಮನಾಭ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪದ್ಮನಾಭ ಅವರು ತನ್ವಿ ಮೀಡಿಯಾ ಕಾರ್ಪ್ ಸಂಸ್ಥೆ ಲಾಂಛನದಲ್ಲಿ ನಿರ್ಮಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ. ಬಹುಭಾಷಾ ನಟ ಕಿಶೋರ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ “ಸೆಲ್ವ” ಎಂದು ಹೆಸರಿಡಲಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದು.
ನಂದು ಮಲೇಲ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಸದ್ಯದಲ್ಲೇ ಅನಾವರಣವಾಗಲಿದೆ.
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಜಾದ್ ಕಾಕ್ಕು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ.