Prajwal Devaraj steps with Sona Baby for the film "Gana".

“ಗಣ” ಚಿತ್ರಕ್ಕಾಗಿ ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ - CineNewsKannada.com

“ಗಣ” ಚಿತ್ರಕ್ಕಾಗಿ ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ.

“ಗಣ” ಚಿತ್ರಕ್ಕಾಗಿ ಡಾ ವಿ.ನಾಗೇಂದ್ರಪ್ರಸಾದ್ ಬರೆದಿರುವ “ಮೈ ನೇಮ್ ಇಸ್ ಸೋನಾ ಬೇಬಿ ಬೇಬಿ.. ಕಣ್ಣಾಮುಚ್ಚಾಲೆ ನನ್ನ ಹಾಬಿ” ಎಂಬ ಮನಮೋಹಕ ಹಾಡು ಬಿಡುಗಡೆಯಾಗಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ.

ಐಶ್ವರ್ಯ ರಂಗರಾಜನ್ ಈ ಹಾಡನ್ನು ಹಾಡಿದ್ದಾರೆ. “ಸೋನಾ ಬೇಬಿ” ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.

ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪೆÇ್ರಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin