ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದಲ್ಲಿ ‘ಪಾದರಾಯ’

ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನ ಟ್ರ್ಯಾಕ್ ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ‘ಮೈನಾ’. ‘ಸಂಜು ವೆಡ್ಸ್ ಗೀತಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ.

ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ. ನಾಗಶೇಖರ್ ನಾಯಕ ನಟನಾಗಿ ನಟಿಸುವುದರ ಜೊತೆಗೆ ಚಿತ್ರಕ್ಕೆ ಸಹ ನಿರ್ಮಾಪಕ ಕೂಡ ಆಗಿದ್ದಾರೆ.

‘ಪಾದರಾಯ’ ಎಂದರೇ ಹನುಮಂತ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರಲ್ಲಿದೆ. 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ. ಈ ಘಟನೆ ಆರು ರಾಜ್ಯಕ್ಕೆ ಸಂಬಂಧಿಸಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆದ್ರಿಂದ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದೇವೆ. ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಪೂರ್ತಿಯಾಗಿ ಓದಿ

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581