Actor Rishabh Shetty as Chhatrapati Shivaji Maharaj

ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ - CineNewsKannada.com

ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ಮತ್ತೊಂದು ದೊಡ್ಡ ಸಿನಿಮಾದ ಭಾಗವಾಗಿದ್ದಾರೆ. ಇತಿಹಾಸದ ಪುಟಗಳಲ್ಲಿ ಛಾಪು ಮೂಡಿಸಿರುವ, ಮರಾಠ ಸಾಮ್ರಾಜ್ಯದ ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಮಹಾರಾಜ್ ಕಥೆಯೀಗ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ.

“ದಿ ಪ್ತೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್” ಸಿನಿಮಾದಲ್ಲಿ ರಿಷಬ್ ಶೆಟ್ಟಿ, ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಬಾಲಿವುಡ್ ನ ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಶಿವಾಜಿಯ ಲುಕ್ ನಲ್ಲಿ ರಗಡ್ ಆಗಿಯೇ ರಿಷಬ್ ಕಾಣಿಸಿಕೊಂಡಿದ್ದಾರೆ.

ಐತಿಹಾಸಿಕ ಸಿನಿಮಾದ ಪ್ರೀ ಪ್ರೊಡಕ್ಷನ್ಸ್ ಕೆಲಸಗಳು ನಡೆಯುತ್ತಿವೆ. ಜತೆಗೆ ಫಸ್ಟ್ ಲುಕ್ ಪೋಸ್ಟರ್ ಜತೆಗೆ ಸಿನಿಮಾದ ರಿಲೀಸ್ ದಿನಾಂಕವನ್ನೂ ಚಿತ್ರತಂಡ ಬಿಡುಗಡೆ ಮಾಡಿದೆ. 2027ರ ಜನವರಿ 21 ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin