‘ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ
‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೆಣೆದು ನಿರ್ದೇಶನಕ್ಕೆ ಕೆ.ಎಂ ರಘು ಸಜ್ಜಾಗಿದ್ದು ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ.
ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ‘ಇರುವುದೆಲ್ಲವ ಬಿಟ್ಟು’, ‘ಗಜಾನನ ಗ್ಯಾಂಗ್’ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಪೈನಲ್ ಆಗಬೇಕಿದ್ದು,ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ.
ಕೆ.ಎಂ ರಘು. ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಈ ಬಾರಿಯ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ ಮೊದಲ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಶೇರ್ ಮಾಡಿಕೊಳ್ಳಲಿದೆ ಚಿತ್ರತಂಡ.
ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ‘ಜಸ್ಟ್ ಪಾಸ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ ಮೊದಲಾದವರ ತಾರಾಬಳಗ ಸಿನಿಮಾದಲ್ಲಿದೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ.