Actor Naveen Shankar's 'Nodidhuvan Enantare' is all set for release

ನಟ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಬಿಡುಗಡೆಗೆ ಸಜ್ಜು - CineNewsKannada.com

ನಟ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಬಿಡುಗಡೆಗೆ ಸಜ್ಜು

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ನವೀನ್ ಶಂಕರ್ ನಟನೆಯ “ನೋಡಿದವರು ಏನಂತಾರೆ” ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮುಂದಿನ ತಿಂಗಳ 31ರಂದು ತೆರೆಗೆ ಬರಲು ಸಜ್ಜಾಗಿದೆ.ಪ್ರೀತಿ, ನಗು, ಅಳು, ಭಾವನಾತ್ಮಕ ಅಂಶಗಳನ್ನು ಬ್ಲೆಂಡ್ ಮಾಡಿ ಟೀಸರ್ ಕಟ್ ಮಾಡಲಾಗಿದೆ.

#NaveenShankar

ಕುಲದೀಪ್ ಕಾರಿಯಪ್ಪ ಬರೆದು ನಿರ್ದೇಶಿಸಿಸಿರುವ “ನೋಡಿದವರು ಏನಂತಾರೆ” ಚಿತ್ರವನ್ನು ನಾಗೇಶ್ ಗೋಪಾಲ್ ನಿರ್ಮಾಣ ಮಾಡಿದ್ದಾರೆ. ಅಪೂರ್ವ ಭಾರದ್ವಾಜ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಹೊಯ್ಸಳ, ಕ್ಷೇತ್ರಪತಿ ಮತ್ತು ಸಲಾರ್ ಸಿನಿಮಾಗಳಲ್ಲಿ ರಗಡ್ ಪಾತ್ರಗಳ ಮೂಲಕ ಎಲ್ಲರ ಗಮನಸೆಳೆದಿದ್ದ ನವೀನ್ ಶಂಕರ್, ಚಿತ್ರದಲ್ಲಿ ಕೊಂಚ ವಿಭಿನ್ನವಾಗಿ ಕಾಣಿಸಲಿದ್ದಾರೆ.

ಮಯೂರೆಶ್ ಅಧಿಕಾರಿ ಹೃದಯಸ್ಪರ್ಶಿ ಸಂಗೀತ ಸಂಯೋಜಿಸಿದ್ದಾರೆ. ಅಶ್ವಿನ್ ಕೆನ್ನೆಡಿ ಛಾಯಾಗ್ರಹಣ, ಮನು ಶೆಡಗಾರ್ ಸಂಕಲನ ಚಿತ್ರಕ್ಕಿದೆ. ಕುಲದೀಪ್ ಕಾರಿಯಪ್ಪ ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.

#NaveenShankar

ಖ್ಯಾತ ಲೇಖಕ ಹಾಗು ಸಾಹಿತಿ ಜಯಂತ್ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಒಂದು ಹಾಡಿಗೆ ಲೈಲಾ ಪದ ಪೋಣಿಸಿದ್ದಾರೆ ಸಾಧು ಕೋಕಿಲ, ಅನನ್ಯಾ ಭಟ್ ಮತ್ತು ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಜನವರಿ 31 ರಂದು ಬಿಡುಗಡೆಯಾಗ್ತಿರುವ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಅನ್ನೋದು ಚಿತ್ರತಂಡದ ಅಭಿಪ್ರಾಯ.

#NaveenShankar

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin