Fans are in awe of Vajramuni's look in "Yalakunni

” ಯಲಾಕುನ್ನಿ ” ವಜ್ರಮುನಿ ಲುಕ್ ಗೆ ಅಭಿಮಾನಿಗಳು ಪಿಧಾ - CineNewsKannada.com

” ಯಲಾಕುನ್ನಿ ” ವಜ್ರಮುನಿ ಲುಕ್ ಗೆ ಅಭಿಮಾನಿಗಳು ಪಿಧಾ

ನಟ ಕೋಮಲ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ “ವಜ್ರಮುನಿ “ಲುಕ್ ಬಿಡುಗಡೆಯಾಗಿದ್ದು ವಜ್ರಮುನಿಯೇ ನೋಡಿದಂತಾಗಿದೆ ಎಂದು ಅಭಿಮಾನಿಗಳು ಫಿದಾ ಆಗಿದ್ದಾರೆ

ಗಣೇಶನ ಹಬ್ಬದಂದು ಕೋಮಲ್ ಕುಮಾರ್ ಅಭಿನಯದ “ಯಲಾಕುನ್ನಿ” ಚಿತ್ರದ ಫಸ್ಟ್ ಲುಕ್. ಬಿಡುಗಡೆಯಾಗಿದ್ದು ಅಭಿಮಾನಿಗಳ ಹರ್ಷಕ್ಕೆ ಕಾರಣವಾಗಿದೆ.

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ನಿರ್ಮಿಸಿರುವ,ಹೊಸ ಪ್ರತಿಭೆ ಎನ್ .ಆರ್ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ಯಲಾಕುನ್ನಿ” ಚಿತ್ರದ ಫಸ್ಟ್ ಲುಕ್ ಗಣೇಶನ ಹಬ್ಬದ ಶುಭದಿನದಂದು ಬಿಡುಗಡೆಯಾಗಿದೆ.

ಕೋಮಲ್ ಅವರು ಖ್ಯಾತ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೋಮಲ್ ಅವರ ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಷ್ಟೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ‌. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin