“ಲಕ್’’ ಚಿತ್ರದ ಮೂಲಕ ಮಂಜು ನಾಯಕಕ್ಯಾರಾವಾನ್ ಚಾಲಕನ ಹೊಸ ಸಾಹಸ
ಅದೃಷ್ಠ ಅಂದರೆ ಹಾಗೆ. ಯಾರಿಗೆ ಯಾವಾಗ ಬರುತ್ತದೆ ಎಂದು ಹೇಳಲು ಆಗುವುದಿಲ್ಲ. ಕ್ಯಾರವಾನ್‍ನಲ್ಲಿ ಅನೇಕ ಸ್ಟಾರ್‍ಗಳಿಗೆ ವಾಹನ ಓಡಿಸುತ್ತಿದ್ದ ಸ್ಮೈಲ್ ಮಂಜುಗೆ ಈಗ ಅದೃಷ್ಠ ಖುಲಾಯಿಸಿದೆ. ಅರ್ಥಾತ್ ಇದುವರೆಗೆ ನಾಯಕರಿಗೆ ಕಾರವಾನ್ ಓಡಿಸುತ್ತಿದ್ದ ಮಂಜು ಇದೀಗ “ ಲಕ್ “ ಚಿತ್ರದ ಮೂಲಕ ನಾಯಕನಾಗಿದ್ದಾರೆ.
ಜೀವನದಲ್ಲಿ ಯಾರಿಗೆ ಯಾವಾಗ “ಲಕ್” ಬರುತ್ತದೆ ಎನ್ನುವುದನ್ನು ಹೇಳಲಿಕ್ಕೆ ಆಗುವುದಿಲ್ಲ, ಕಳೆದ ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಸ್ಮೈಲ್ ಮಂಜು ಅವರು “ಲಕ್” ಕುದಿರಿದೆ.
ಇದರ ಪರಿಣಾಮ “ಲಕ್ “ ಚಿತ್ರದ ಮೂಲಕ ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ “90 ಕುಡಿ ಮಗ ಪಲ್ಟಿ ಹೊಡಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಯಿತು. ಅಪ್ಪಿ ಹಾಗೂ ಹರೀಶ್ ಬರೆದಿರುವ ಈ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ. ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ.
ಚಿತ್ರದಲ್ಲಿ ಮೊದಲ ಬಾರಿಗೆ ನಾಯಕನಾಗಿ ನಟಿಸುತ್ತಿರುವ ಸ್ಮೈಲ್ ಮಂಜು ಅವರಿಗೆ ಈ ಚಿತ್ರದ ಮೂಲಕ ಕ್ಯಾರವಾನ್ ಸ್ಟಾರ್ ಎನ್ನುವ ಬಿರುದು ನೀಡಲಾಗಿದೆ.
ಚಿತ್ರದ ಕುರಿತು ಮಾಹಿತಿ ಹಂಚಿಕೊಂದ ಮಂಜು, ನಾನು ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್ ಓಡುಸುತ್ತಿದ್ದೇನೆ. ಗೋಲ್ಡನ್ ಸ್ಟಾರ್ ಗಣೇಶ್, ಡಾಲಿ ಅವರ ಕ್ಯಾರಾವ್ಯಾನ್ ಗೆ ನಾನೇ ಚಾಲಕ. ಸಿನಿಮಾ ಮಾಡುವ ಆಸೆಯಿತ್ತು. ದುಡಿದ ಹಣ ಹಾಗೂ ಜಮೀನು ಮಾರಿದ ಹಣ ಎರಡೂ ಸೇರಿಸಿ ಈ ಚಿತ್ರ ನಿರ್ಮಾಣ ಮಾಡಿದ್ದೇನೆ ಜೊತೆಗೆ ನಾಯಕನಾಗೂ ಅಭಿನಯಿಸಿದ್ದೇನೆ. ನನ್ನ ಮೇಲೆ ಪ್ರೀತಿಯಿಟ್ಟು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ಸೇರಿದಂತೆ ಚಿತ್ರರಂಗದ ಅನೇಕ ನಾಯಕರು ಪೆÇೀಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಚಿತ್ರತಂಡದ ಸಹಕಾರಕ್ಕೆ ಧನ್ಯವಾದ ಎಂದರು.
ಚಿತ್ರದ ಹಾಡು ಬಾಕಿ ಇದೆ. ಅದನ್ನು ನಂದಿನಿ ಲೇಔಟ್ ಸೇರಿದಂತೆ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡುವ ಉದ್ದೇಶವಿದೆ. ಚುನಾವಣೆ ಸಮಯ ಆಗಿರುವ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಚಿತ್ರೀಕರಣ ಮಾಡಲು ಅನುಮತಿ ನೀಡುತ್ತಿಲ್ಲ. ಹೀಗಾಗಿ ಚುನಾವಣೆ ಮುಗಿದ ಬಳಿಕ ಚಿತ್ರೀಕರಣ ಮಾಡುವ ಉದ್ದೇಶವಿದೆ.
ಚಿತ್ರಕ್ಕೆ ನಾಯಕಿ ಇನ್ನೂ ಆಯ್ಕೆಯಾಗಿಲ್ಲ. ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರದಲ್ಲಿ ನಾಯಕಿಯ ಪಾತ್ರ ಒಂದು ರೀತಿ ಯಾರೇ ನೀನು ಚೆಲುವೆ ಚಿತ್ರದಲ್ಲಿ ಬರುವ ಪಾತ್ರದಂತಿದೆ. ಕ್ಲೈಮಾಕ್ಸ್‍ನಲ್ಲಿ ನಾಯಕಿ ಭೇಟಿ ಆಗುವ ಸನ್ನಿವೇಶ ಇದೆ. ಹೀಗಾಗಿ ನಾಯಕಿ ಭಾಗದ ಚಿತ್ರೀಕರಣ ಭಾಕಿ ಉಳಿಸಿಕೊಂಡಿದ್ದೇವೆ. ನಟ ಕೋಮಲ್ ಅವರ ಜೊತೆ ನಟಿಸಿದ ಧಾರಾವಾಹಿ ನಟಿಯನ್ನು ಚಿತ್ರಕ್ಕಾಗಿ ಕೇಳಲಾಗಿದೆ.ಅವರು ಇನ್ನೂ ಒಪ್ಪಿಕೊಂಡಿಲ್ಲ. ಚಿತ್ರೀಕರಣದಲ್ಲಿದ್ದೇನೆ ಮಾತನಾಡೋಣ ಎಂದಿದ್ದಾರೆ ಎಂದರು.
ನಿರ್ದೇಶಕ ಹರೀಶ್ ಮಾಹಿತಿ ನೀಡಿ,ಚಿತ್ರಕ್ಕೆ ಮೊದಲೊಬ್ಬ ನಿರ್ದೇಶಕರಿದ್ದರು. ಹಾಗೆ ನಾಯಕರೂ ಬೇರೆಯೇ ಇದ್ದರು. ಅನಿವಾರ್ಯ ಕಾರಣದಿಂದ ಅವರು ಚಿತ್ರದಿಂದ ದೂರವಾದಾಗ ಈ ಚಿತ್ರಕ್ಕೆ ನಾನು ನಿರ್ದೇಶಕನಾದೆ. ಮಂಜು ನಾಯಕನಾದರು. ನನ್ನ ಜೀವದಲ್ಲೇ ನಡೆದಿರುವ ಘಟನೆಯನ್ನು ಸಿನಿಮಾ ರೂಪದಲ್ಲಿ ಆಚೆ ತರುತ್ತಿದ್ದೇನೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಡಾಲಿ ಧನಂಜಯ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಒಂದು ದಿನ, ಅದರಲ್ಲೂ ಕೆಲವೇ ಗಂಟೆಗಳಲ್ಲಿ ನಡೆಯುವ ಕಥೆಯಾಗಿದೆ. ಪದ್ಮಜಾರಾವ್, ಕಡ್ಡಿಪುಡಿ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದರು.
ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿರುವ ರೇಣು ಹಾಡು ಬರೆದಿರು ಅಪ್ಪಿ ಹಾಗೂ ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ಚಿತ್ರದ ಕುರಿತು ಮಾತನಾಡಿದರು.
ನಾನು ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್ ಓಡುಸುತ್ತಿದ್ದೇನೆ. ಗೋಲ್ಡನ್ ಸ್ಟಾರ್ ಗಣೇಶ್, ಡಾಲಿ ಅವರ ಕ್ಯಾರಾವ್ಯಾನ್ ಗೆ ನಾನೇ ಚಾಲಕ. ಸಿನಿಮಾ ಮಾಡುವ ಆಸೆಯಿತ್ತು. ದುಡಿದ ಹಣ ಹಾಗೂ ಜಮೀನು ಮಾರಿದ ಹಣ ಎರಡೂ ಸೇರಿಸಿ ಈ ಚಿತ್ರ ನಿರ್ಮಾಣ ಮಾಡಿದ್ದೇನೆ ಜೊತೆಗೆ ನಾಯಕನಾಗೂ ಅಭಿನಯಿಸಿದ್ದೇನೆ. ನನ್ನ ಮೇಲೆ ಪ್ರೀತಿಯಿಟ್ಟು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ಸೇರಿದಂತೆ ಚಿತ್ರರಂಗದ ಅನೇಕ ನಾಯಕರು ಪೆÇೀಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಚಿತ್ರತಂಡದ ಸಹಕಾರಕ್ಕೆ ಧನ್ಯವಾದ ಎಂದರು ನಾಯಕ ಹಾಗೂ ನಿರ್ಮಾಪಕ ಕ್ಯಾರಾವ್ಯಾನ್ ಸ್ಟಾರ್ ಸ್ಮೈಲ್ ಮಂಜು.
ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿರುವ ರೇಣು ಹಾಡು ಬರೆದಿರು ಅಪ್ಪಿ ಹಾಗೂ ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ಚಿತ್ರದ ಕುರಿತು ಮಾತನಾಡಿದರು.