ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್ ಬಿಡುಗಡೆ
![ಲಿಖಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ‘ಫುಲ್ ಮೀಲ್ಸ್’ ಪೋಸ್ಟರ್ ಬಿಡುಗಡೆ](https://www.cininewskannada.com/wp-content/uploads/2023/07/1-58.jpg?v=1690700196)
ನಾಯಕ ಲಿಖಿತ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ “ಫುಲ್ ಮೀಲ್ಸ್” ಚಿತ್ರತಂಡ ಎರಡನೇ ಪೋಸ್ಟರ್ ಬಿಡುಗಡೆ ಮಾಡಿದೆ.ಖುಷಿ ರವಿ, ತೇಜಸ್ವಿನಿ ಶರ್ಮ ನಾಯಯಕಿ
![](https://www.cininewskannada.com/wp-content/uploads/2023/07/2-48.jpg)
ಈ ಹಿಂದೆ ಕೂಡ ಬಿಡುಗಡೆಯಾಗಿದ್ದ ಪೋಸ್ಟರ್ ಕೂಡ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ಚಿತ್ರದ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.
ಹಿಂದೆ “ಸಂಕಷ್ಟಕರ ಗಣಪತಿ”, ಪಿ ಆರ್ ಕೆ ಪ್ರೊಡಕ್ಷನ್ಸ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರಗಳ ಮೂಲಕ ಜನರಿಗೆ ಹತ್ತಿರವಾಗಿದ್ದ ನಾಯಕನಟ ಲಿಖಿತ್ ಶೆಟ್ಟಿ ‘ಫುಲ್ ಮೀಲ್ಸ್’ ಮೂಲಕ ನಟನೆಯೊಂದಿಗೆ ಪರಿಪೂರ್ಣ ನಿರ್ಮಾಪಕರೂ ಆಗಿದ್ದಾರೆ.
ಖುಷಿ ರವಿ, ತೇಜಸ್ವಿನಿ ಶರ್ಮ ನಾಯಯಕಿರರಾಗಿದ್ದು, ಪ್ರಮುಖ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್,. ಚಂದ್ರ ಕಲಾ ಮೋಹನ್, ರಾಜೇಶ್ ನಟರಂಗ, ರವಿ ಶಂಕರ ಗೌಡ, ಸುಜಯ್ ಶಾಸ್ತ್ರಿ,
ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ ಇದ್ದಾರೆ.
ಎನ್ ವಿನಾಯಕ ನಿರ್ದೇಶನದ ಈ ಚಿತ್ರಕ್ಕೆ, ಮನೋಹರ್ ಜೋಷಿ ಛಾಯಾಗ್ರಹಣವಿದೆ. ಹರೀಶ ರಾಜಣ್ಣ ಸಂಭಾಷಣೆ ಬರೆದಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲೆ, ಗುರು ಕಿರಣ್ ಸಂಗೀತ ಫುಲ್ ಮೀಲ್ಸ್ ಚಿತ್ರಕ್ಕಿದೆ.