“ಆಲ್ಫಾ #ಮೆನ್ ಲವ್ ವೈಲೆನ್ಸ್#” ಚಿತ್ರದ ಚಿತ್ರೀಕರಣ ಮುಕ್ತಾಯ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ” ಗೀತಾ” ಹಾಗೂ ಡಾಲಿ ಧನಂಜಯ್ ನಟನೆಯ “ಗುರುದೇವ ಹೊಯ್ಸಳ” ಚಿತ್ರಗಳ ನಂತರ ನಿರ್ದೇಶಕ ವಿಜಯ್ ನಿರ್ದೇಶಿಸಿರುವ ಮೂರನೇ ಚಿತ್ರ “ಆಲ್ಫಾ #ಮೆನ್ ಲವ್ ವೈಲೆನ್ಸ್#” ಸದ್ದಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿದೆ.

ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಹೆಚ್ಚು ಜನ ಇಷ್ಟ ಪಡುತ್ತಿದ್ದಾರೆ. ಅಂತಹ ಒಂದೊಳ್ಳೆ ಕಂಟೆಂಟ್ ವುಳ್ಳ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ “ಆಲ್ಫಾ #ಮೆನ್ ಲವ್ ವೈಲೆನ್ಸ್#”.ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಮಂಗಳೂರು ಹಾಗೂ ಮಾಲೂರಿನಲ್ಲಿ 70ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆದಿದೆ.
ಆನಂದಕುಮಾರ್ ನಿರ್ಮಾಣ ಮಾಡುತ್ತಿರುವ ಚಿತ್ರದಲ್ಲಿ ಹೇಮಂತ್ ಕುಮಾರ್ ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ಚಿತ್ರದ ನಾಯಕನಾಗಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನವನಾಯಕನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ.
” ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ಮಾನಸಿ ಸುಧೀರ್, ಗಿರಿರಾಜ್, ರಾಘು ಶಿವಮೊಗ್ಗ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.

ನಾಗಾರ್ಜುನ ಶರ್ಮಬರೆದಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಹೆಸರಾಂತ ಸಂಗೀತ ನಿರ್ದೇಶಕ ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ, ಅಮರ್ ಕಲಾ ನಿರ್ದೆಶನ ಹಾಗೂ ಭೂಷಣ್ ನೃತ್ಯ ನಿರ್ದೇಶನವಿರುವ “ಆಲ್ಫಾ #ಮೆನ್ ಲವ್ ವೈಲೆನ್ಸ್#” ಚಿತ್ರಕ್ಕೆ ಜನಪ್ರಿಯ ಸಂಭಾಷಣೆಗಾರ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳು ಚಿತ್ರದಲ್ಲಿದ್ದು, ವಿಜಯ್, ವಿನೊದ್, ಅರ್ಜುನ್ ರಾಜ್ ಹಾಗೂ ಯೋಗಾನಂದ ಸಾಹಸ ನಿರ್ದೇಶನ ಮಾಡಿದ್ದಾರೆ.

