Director Simple Suni releases the trailer of the film 'Om Shivam'

‘ಓಂ ಶಿವಂ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ನಿರ್ದೇಶಕ ಸಿಂಪಲ್ ಸುನಿ - CineNewsKannada.com

‘ಓಂ ಶಿವಂ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ನಿರ್ದೇಶಕ ಸಿಂಪಲ್ ಸುನಿ

ಚಿತ್ರರಂಗದೊಂದಿಗೆ ಹಲವು ವರ್ಷಗಳ ನಂಟಿರುವ ಅಲ್ವಿನ್ ನಿರ್ದೇಶನದ, ದೀಪಾ ಮೂವೀಸ್ ಲಾಂಛನದಲ್ಲಿ ಕೆ.ಎನ್.ಕೃಷ್ಣ ನಿರ್ಮಿಸಿರುವ ಹಾಗೂ ಭಾರ್ಗವ ಕೃಷ್ಣ ಮತ್ತು ವಿರಾನಿಕ ಶೆಟ್ಟಿ ನಾಯಕ – ನಾಯಕಿಯಾಗಿ ನಟಿಸಿರುವ “ಓಂ ಶಿವಂ” ಚಿತ್ರದ ಟ್ರೇಲರ್ ಅನ್ನುನಿರ್ದೇಶಕ ಸಿಂಪಲ್ ಸುನಿ ಟ್ರೇಲರ್ ಬಿಡುಗಡೆ ಮಾಡಿ ಶುಭಹಾರೈಸಿದರು,

ನಿರ್ದೇಶಕ ಎಲ್ವಿನ್ ಮಾತನಾಡಿ ಚಿತ್ರಕ್ಕೆ ಆರಂಭದ ದಿನದಿಂದಲೂ ನೀಡುತ್ತಿರುವ ಪೆÇ್ರೀತ್ಸಾಹಕ್ಕೆ ಚಿರಋಣಿ. ಈಗಾಗಲೇ ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲಿ ಸಂಗೀತ ನೀಡಿರುವ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದೆ. ನಾಲ್ಕನೇ ಹಾಡನ್ನು ಲೂಸ್ ಮಾದ ಯೋಗಿ ಅವರು ಸೆಪ್ಟೆಂಬರ್ 1 ರಂದು ಬಿಡುಗಡೆ ಮಾಡಲಿದ್ದಾರೆ.ಸೆಪ್ಟೆಂಬರ್ 5 ರಂದು ಚಿತ್ರ ತೆರೆಗೆ ಬರಲಿದೆ. ಲವ್ ಮತ್ತು ಆಕ್ಷನ್ ಚಿತ್ರ. ಎರಡು ಜಾನರ್‍ನಲ್ಲಿ ಸಿನಿಮಾ ಸಾಗುತ್ತದೆ. ಇಂದಿನ ಹುಡುಗ-ಹುಡುಗಿ ಪ್ರೀತಿ ಉಳಿಸಿಕೊಳ್ಳಲು ಹೇಗೆಲ್ಲಾ ಹೊರಾಡುತ್ತಾರೆ ಎಂಬ ಕಥೆ ಜೊತೆಗೆ ಭಾವನಾತ್ಮಕ ಸನ್ನಿವೇಶಗಳು ನೋಡುಗರ ಗಮನ ಸೆಳೆಯುತ್ತದೆ ಎಂದು ಹೇಳಿದರು.

ನಿರ್ಮಾಪಕ ಕೃಷ್ಣ ಕೆ.ಎನ್ ಮಾತನಾಡಿ, 20 ವರ್ಷಗಳ ಹಿಂದೆ ನಾಯಕನಾಗುವ ಆಸೆ ಇತ್ತು. ಅದು ಆಗಲಿಲ್ಲ. ಈಗ ನನ್ನ ಮಗ ಭಾರ್ಗವ ಕೃಷ್ಣ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾನೆ. ನಾನು ಕೂಡ ನಿರ್ಮಾಣದ ಜೊತೆಗೆ ಪೆÇಲೀಸ್ ಅಧಿಕಾರಿ ಪಾತ್ರ ಕೂಡ ಮಾಡಿದ್ದೇನೆ. ನಿರ್ದೇಶಕ ಆಲ್ವಿನ್ ಒಂದೊಳ್ಳೆ ಚಿತ್ರ ಮಾಡಿದ್ದಾರೆ. ಚಿತ್ರ ಉತ್ತಮವಾಗಿ ಬರಲು ಚಿತ್ರತಂಡ ಸಾಥ್ ನೀಡಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲೂ “ಓಂ ಶಿವಂ” ನಿರ್ಮಾಣವಾಗಿದೆ. ಆದರೆ, ಸೆಪ್ಟೆಂಬರ್ 5 ಮೊದಲು ಕನ್ನಡದಲ್ಲಿ ಮಾತ್ರ ಈ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.

ನಾಯಕ ಭಾರ್ಗವ ಕೃಷ್ಣ ಮಾತನಾಡಿ ದುಬೈನಲ್ಲಿ ಇಂಟರ್ ನ್ಯಾಷನಲ್ ಬ್ಯುಸಿನೆಸ್ ಮುಗಿಸಿದ್ದೇನೆ. ಚಿತ್ರೀಕರಣದ ಸಮಯದಲ್ಲಿ ಅಲ್ಲಿಂದಲೇ ಓಡಾಡುತ್ತಿದ್ದೆ ಆಲ್ವಿನ್ ಹೇಳಿದ ಕಥೆ ಬಹಳ ಇಷ್ಟವಾಯಿತು. ಮೂರು ಶೇಡ್ ಗಳಲ್ಲಿ ನನ್ನ ಪಾತ್ರ ಇದೆ. ಶಿವ ನನ್ನ ಪಾತ್ರದ ಹೆಸರು. ಚಿತ್ರೀಕರಣಕ್ಕೂ ಮುನ್ನ ತಯಾರಿ ಮಾಡಿಕೊಂಡು ಆನಂತರ ನಟಿಸಿದ್ದೇನೆ. ಲವ್, ಆಕ್ಷನ್, ಸೆಂಟಿಮೆಂಟ್ ಹೀಗೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ ಎಂದರು

ನಾಯಕಿ ವಿರಾನಿಕ ಶೆಟ್ಟಿ ಮಾತನಾಡಿ ಚಿತ್ರದ ಆರಂಭದಿಂದಲೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ, ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು.

ಚಿತ್ರದಲ್ಲಿ ನಟಿಸಿರುವ ನಟ ವರ್ಧನ್ ತೀರ್ಥಹಳ್ಳಿ, ನಟಿ ಅಪೂರ್ವ ಮುಂತಾದ ಚಿತ್ರತಂಡದ ಸದಸ್ಯರು “ಓಂ ಶಿವಂ” ಬಗ್ಗೆ ಮಾತನಾಡಿದರು. ವೀರೇಶ್ ಛಾಯಾಗ್ರಹಣ ಹಾಗೂ ಸತೀಶ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin