Motion poster of the film 'Dinsol' released: Curiosity increases

“ದಿಂಸೋಲ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

“ದಿಂಸೋಲ್’ ಚಿತ್ರದ ಮೋಷನ್  ಪೋಸ್ಟರ್  ಬಿಡುಗಡೆ: ಕುತೂಹಲ ಹೆಚ್ಚಳ

“ಅಭಿರಾಮಚಂದ್ರ” ಚಿತ್ರದಲ್ಲಿ ಜೋಡಿಯಾಗಿದ್ದ ರಥಾಕಿರಣ್ ಮತ್ತು ಶಿವಾನಿ ರೈ ಇದೀಗ ಎರಡನೇ ಬಾರಿಗೆ ““ದಿಂಸೋಲ್’ ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ, ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಕುತೂಹಲ ಹೆಚ್ಚು ಮಾಡಿದೆ

‘ದಿಂಸೋಲ್’ ಹೀಗೊಂದು ವಿಭಿನ್ನ ಟೈಟಲ್‍ನ ಅದ್ದೂರಿ ಸಿನಿಮಾ ರೆಡಿಯಾಗುತ್ತಿದೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಿನಿಮಾದ ಭರ್ಜರಿ ಪೋಸ್ಟರ್ ಬಿಡುಗಡೆಯಾಗಿತ್ತು. ಈಗ ಮೋಷನ್ ಪೋಸ್ಟರ್ ಬಿಡುಗಡೆ ಆಗಿದೆ

ನಾಗೇಂದ್ರ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ದಿಂಸೋಲ್” ಚಿತ್ರ ಕರಾವಳಿಯ ಸಂಸ್ಕೃತಿ ಹಿನ್ನೆಲೆ ಆಧರಿಸಿ ಮಾಡುತ್ತಿರುವ ಚಿತ್ರ, ಈಗಾಗಲೇ ಕರಾವಳಿ ಸಂಸ್ಕೃತಿಯ ಸೊಡಗನ್ನು ಸಾರುವ ಅನೇಕ ಸಿನಿಮಾಗಳು ಬರುತ್ತಿದ್ದು. ಇದೀಗ ದಿಂಸೋಲ್ ಕೂಡ ಅದೇ ಸಾಲಿಗೆ ಸೇರಿಕೊಂಡಿದೆ.

ದಿಂಸೋಲ್ ರಥಾಕಿರಣ್ ನಾಯನಾಗಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ. ನಾಯಕಿಯಾಗಿ ಶಿವಾನಿ ರೈ ನಟಿಸುತ್ತಿದ್ದಾರೆ. ಈ ಮೊದಲು ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಪ್ರಮುಖ ಪಾತ್ರದಲ್ಲಿ ರಾಕೇಶ್ ಅಡಿಗ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ಮಾನಸಿ ಸುಧೀರ್, ಕಿರುತೆರೆ ನಟಿ ಅಮೃತಾ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ದಿಂಸೋಲ್ ಎಂದರೆ ಕರಾವಳಿ ಭಾಗದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ನಡೆಯುವ ಅಚರಣೆಯಾಗಿದೆ. ಕರಾವಳಿಯ ಎಲ್ಲಾ ಸಂಸ್ಕೃತಿಯನ್ನು ಸಿನಿಮಾದ ಮೂಲಕ ದೃಶ್ಯ ರೂಪಕ್ಕೆ ತರುತ್ತಿದ್ದಾರೆ ನಿರ್ದೇಶಕ ನಾಗೇಂದ್ರ ಗಾಣಿಗ. ಮೊದಲ ಪೋಸ್ಟರ್ ಕೂಡ ಸಿಕ್ಕಾಪಟ್ಟೆ ಗಮನ ಸೆಳೆದಿತ್ತು. ದೇವಿ ರಕ್ತೇಶ್ವರಿ ಇರುವ ಮೋಷನ್ ಪೋಸ್ಟರ್ ಸಿನಿಮಾದ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ..ಅಲ್ಲದೆ ಈ ಸಿನಿಮಾ ದೇವರ ಬಗ್ಗೆ ಇದೆ ಎನ್ನುವುದು ಈ ಪೋಸ್ಟರ್ ನೋಡಿದ್ರೆ ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಕರಾವಳಿಯ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ.ಚಿತ್ರ ಸಚಿನ್ ವಿ ನಿರ್ಮಾಣದಲ್ಲಿ ಮೂಡಿಬರುತ್ತಿದೆ. ಚಿತ್ರಕ್ಕೆ ಸಂದೀಪ್ ವಲ್ಲೂರಿ ಕ್ಯಾಮರಾ ವರ್ಕ್ ಇದೆ, ರವಿ ಬಸ್ರೂರ್ ಸಂಗೀತ ನೀಡುತ್ತಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin