ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್, ಹಾಡು ಬಿಡುಗಡೆ
ಹಿರಿಯ ನಟ ಸುಚೇಂದ್ರ ಪ್ರಸಾದ್ ನಿರ್ದೇಶನ ಮಾಡಿರುವ ಪದ್ಮಗಂಧಿ’ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು ಕುತೂಹಲ ಕೆರಳಿಸಿದೆ

ವಿಧಾನಪರಿಷತ್ ಮಾಜಿ ಸದಸ್ಯೆ ಎಸ್.ಆರ್.ಲೀಲಾ ನಿರ್ಮಾಣ ಮಾಡಿದ್ದಾರೆ. ಶಂಕರ್‌ಶಾನ್‌ಭೋಗ್ ಸೇರಿದಂತೆ ಹಲವು ಗಾಯಕರುಗಳು ಗೀತೆಯ ಸಾಲು ಹಾಡುವುದರ ಮೂಲಕ, ಹಾಗೂ ಕೋಟೆ ರಾಮಚಂದ್ರಭಟ್ ಸಂಸ್ಕ್ರತ ಭಾಷೆಯ ಟ್ರೇಲರ್ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು, ಪೇಜಾವರ ಮಠಾಧೀಶರ ಭಾಗಿಯಾಗಿದ್ದುದು ಸಮಾರಂಭಕ್ಕೆ ಭೂಷಣ ತಂದುಕೊಟ್ಟಿತು. ಶ್ರೀ ಪಾದರು ಮಾತನಾಡಿ ಸುಚೇಂದ್ರ ಪ್ರಸಾದ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆಂದು ಭಾವಿಸಿದ್ದೇನೆ. ಕನ್ನಡ ಚಿತ್ರರಂಗ ಲಾಭದಾಯಕವಲ್ಲದ ಪರಿಸ್ಥಿತಿಯಲ್ಲಿ ಸಿನಿಮಾ ಮಾಡಿದ್ದಾರೆ. ಸಂಸ್ಕ್ರತ ಅನ್ನುವುದು ದೇಶಾಂತರಕ್ಕೂ ಸಲ್ಲುವ ಭಾಷೆ. ಆದ್ದರಿಂದ ವಿಸ್ಕ್ರತವಾದಂತ ನೋಡುಗರು, ಕೇಳುಗರು ಇರುತ್ತಾರೆ. ಇದರ ಹಿಂದೆ ಕೈ ಜೋಡಿಸಿದ ಎಲ್ಲರಿಗೂ ಶ್ರೇಯಸು ಸಿಗಲೆಂದು ಶುಭ ನುಡಿಗಳನ್ನು ಹೇಳಿದರು.
ವಿದ್ಯಾರ್ಥಿಯಾಗಿ ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ರಿಯಲ್‌ದಲ್ಲಿ ಹೆಸರು ಮಾಡಿರುವ ಶತಾವಧಾನಿ ಡಾ.ಆರ್.ಗಣೇಶ್, ಡಾ.ಗೌರಿ ಸುಬ್ರಹ್ಮಣ್ಯ,ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್, ಮೃತ್ಯುಂಜಯಶಾಸ್ತ್ರಿ, ಪಂಡಿತ ಪ್ರಸನ್ನವೈದ್ಯ, ಡಾ.ದೀಪಕ್‌ಪರಮಶಿವನ್, ಹೇಮಂತಕುಮಾರ.ಜಿ ಬಣ್ಣ ಹಚ್ಚಿರುವುದು ಚಿತ್ರಕ್ಕೆ ಹಿರಿಮೆ ತಂದುಕೊಟ್ಟಿದೆ. ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಲಾರ್-ನಾಗರಾಜ್ ಅದ್ವಾನಿ-ಗಿರಿಧರ್‌ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನವಿದೆ.

ನಿರ್ದೇಶಕ ಸುಚೇಂದ್ರಪ್ರಸಾದ್ ಮಾತನಾಡಿ ಸಿನಿಮಾ ಹುಟ್ಟಿದ ಬಗ್ಗೆ ಅನುಭವಗಳನ್ನು ಹಂಚಿಕೊಂಡು ಮಾಧ್ಯಮದವರ ಇತ್ಯಾಹ್ಮಕ ಸ್ಪಂದನೆ ಸಿಗಬೇಕಿದೆ. ತಾವುಗಳು ನಮ್ಮ ಮನವಿಯನ್ನು ಒಪ್ಪಿಕೊಳ್ಳಬೇಕೆಂದು ಕೋರಿದರು.
ನಿರ್ಮಾಪಕಿ ಎಸ್.ಆರ್.ಲೀಲಾ ಮಾತನಾಡಿ ಸಿನಿಮಾ ಹಾದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ. ನಮ್ಮಲ್ಲಿ ದೈವೀಕ ಅನುಭೂತಿ ಸ್ಪುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಧಿಯನ್ನು ವಿಸ್ತಿರಿಸಿಕೊಳ್ಳುತ್ತಾ, ಅದರ ಅಗಾದತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರಯಂತೆ ಭಾಸವಾಗಲಾರಂಭಿಸಿದೆ. ಇದೆಲ್ಲಾವನ್ನು ಸಂಶೋಧಿಸಿ ವಿಷಯಗಳನ್ನು ಸನ್ನಿವೇಶಗಳಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ನನ್ನ ಮನಸ್ಸಿನಲ್ಲಿರುವಂತೆ ತೆರೆ ಮೇಲೆ ತೋರಿಸಿದ್ದಾರೆ. ನೀವುಗಳು ವ್ಯಾಪಕ ಪ್ರಚಾರ ಮಾಡಿದರೆ, ನಮ್ಮ ಶ್ರಮ ಸಾರ್ಥಕವಾದಂತೆ ಎಂದು ಅಭಿಪ್ರಾಯಪಟ್ಟರು.

ದೇಶದ ಪ್ರಮುಖ ವಿದ್ವಾಂಸರು ಸಭೆಯಲ್ಲಿ ಹಾಜರಿದ್ದುದಲ್ಲದೆ, ಅನೇಕ ಮಠಾದೀಶರು ಅನುಗ್ರಹ ಸಂದೇಶವನ್ನು ಚಿತ್ರಕ್ಕೆ ದಯಪಾಲಿಸಿದ್ದುದು,

