ಮಲೆಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
ಭಾರತೀಯ ಚಲನಚಿತ್ರ ರಂಗಕ್ಕೆ ಸಲ್ಲಿಸಿದ ಅನುಪಮ ಸೇವೆ ಪರಿಗಣಿಸಿ, ಮಲಯಾಳಂ ಚಿತ್ರರಂಗದ ಹಿರಿಯ ನಟ ಮೋಹನ್ ಲಾಲ್ ಅವರಿಗೆ 2023 ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ

ಮಲೆಯಾಳಂ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರದ ಮೂಲಕ ಜನ ಮನ ಸೂರೆಗೊಂಡಿರುವ ಹಿರಿಯ ನಟ ಮೋಹನ್ ಲಾಲ್ ಅವರು ಕನ್ನಡದ ಶಿಕಾರಿ, ಲವ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಕೇಂದ್ರ ಸರ್ಕಾರ ಮೋಹನ್ ಲಾಲ್ ಅವರ ಹೆಸರನ್ನು ಘೋಷಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡುವ ಅಪ್ರತಿಮ ಕೊಡುಗೆಗಾಗಿ ನಟ, ನಿರ್ದೇಶಕ ಮತ್ತು ನಿರ್ಮಾಪಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ಇದೇ 23ರಂದು ನಡೆಯಲಿರುವ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮೋಹನ್ ಲಾಲ್ ಬಹುಮುಖ ಪ್ರತಿಭೆ: ಪ್ರಧಾನಿ
ಹಿರಿಯ ನಟ ಮೋಹನ್ ಲಾಲ್ ಅವರು ಬಹುಮುಖ ಪತ್ರಿಭೆ.. ದಶಕಗಳ ಕಾಲದ ಮಲಯಾಳಂ ಸಿನಿಮಾ, ರಂಗಭೂಮಿಯ ಪ್ರಮುಖ ಜ್ಯೋತಿಯಾಗಿ ನಿಂತಿದ್ದಾರೆ ಮತ್ತು ಕೇರಳದ ಸಂಸ್ಕೃತಿಯ ಬಗ್ಗೆ ಆಳವಾದ ಒಲವು ಹೊಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿ ಎಂದು ಶುಭ ಹಾರೈಸಿದ್ದಾರೆ
ಸಚಿವ ಅಶ್ವಿನ್ ವೈಷ್ಣವ್ ಅಭಿನಂಧನೆ
2023ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ನಟ ಮೋಹನ್ ಲಾಲ್ ಅವರನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನ್ ವೈಷ್ಣವ್ ಅಭಿನಂದಿಸಿದ್ದಾರೆ.
ಕೇರಳದ ಸುಂದರ ನಾಡು ಅಡಿಪೋಲಿಯಿಂದ ಹಿಡಿದು ಪ್ರಪಂಚದಾದ್ಯಂತದ ಪ್ರೇಕ್ಷಕರನ್ನು ಹೊಂದಿರುವ ನಟ ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಗೌರ ದೊರೆತಿಧ. ಪರಂಪರೆ ಭಾರತದ ಸೃಜನಶೀಲ ಮನೋಭಾವವನ್ನು ಪ್ರೇರೇಪಿಸಲಿದೆ ಎಂದಿದ್ದಾರೆ
ಮಲೆಯಾಳಂ ಸೇರಿದಂತೆ ಭಾರತೀಯ ಚಿತ್ರರಂಗದ ನಟರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಚಿತ್ರರಂಗದ ಗಣ್ಯರು ಮೋಹನ್ ಲಾಲ್ ಅವರನ್ನು ಅಭಿನಂಧಿಸಿದ್ದಾರೆ.

