“ಮಾಯಾವಿ” ಚಿತ್ರದ ಹಾಡು ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

“ಮಾಯಾವಿ” ಚಿತ್ರದ ಹಾಡು ಬಿಡುಗಡೆ: ಕುತೂಹಲ ಹೆಚ್ಚಳ

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ `ಮಾಯಾವಿ’ಚಿತ್ರ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ‘ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆಯಾಗಿದ್ದು ಗಮನ ಸೆಳೆದಿವೆ.

ಚಿತ್ರದುರ್ಗ ಮೂಲದ ಯುವ ಪ್ರತಿಭೆ ರಘುರಾಮ್ `ಮಾಯಾವಿ’ ಚಿತ್ರದಲ್ಲಿ ನಾಯಕರಾಗಿ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ ನಿಶ್ಚಿತಾ ಶೆಟ್ಟಿ ನಾಯಕಿ.ಉಳಿದಂತೆ ಹಿರಿಯ ನಟ ಎಂ.ಕೆ. ಮಠ, ಸೂರ್ಯ ಪ್ರವೀಣ್, ಸುರೇಶ ಬಾಬು, ಅನುರಾಧಾ, ಶಿಲ್ಪಾ, ಖುಷಿ ಗೌಡ ಮತ್ತಿತರರು’ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.ಡಾ. ಮಹಂತೇಶ್ ಹೆಚ್. ನಿರ್ಮಿಸಿದ್ದು ಶಂಕರ್ ಜಿ ನಿರ್ದೇಶನ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದ ಜನಾರ್ಧನ ಸ್ವಾಮಿ, ನಟರಾದ ಸುನಾಮಿ ಕಿಟ್ಟಿ, ಗಣೇಶರಾವ್ ಕೇಸರ್ಕರ್ ಮೊದಲಾದವರು `ಮಾಯಾವಿ ಟ್ರೇಲರ್ ಮತ್ತು ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ನಾಯಕ ರಘುರಾಮ್ ಮಾತನಾಡಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಸಿನಿಮಾದಲ್ಲಿ ನಟನಾಗಿ ಅಭಿನಯಿಸಬೇಕು ಎನ್ನುವುದು ಮೊದಲಿನಿಂದಲೂ ಇದ್ದ ಕನಸು. ಆ ಕನಸು `ಮಾಯಾವಿ’ ಸಿನಿಮಾದ ಮೂಲಕ ನನಸಾಗುತ್ತಿದೆ. ಈ ಸಿನಿಮಾದಲ್ಲಿ ಎರಡು ಶೇಡ್ ಇರುವ ಪಾತ್ರವಿದೆ. ವಾಸ್ತವತೆಗೆ ಹತ್ತಿರವಾಗಿರುವ ಸಿನಿಮಾ. ಚಾಲೆಂಜಿಂಗ್ ಆಗಿರುವ ಪಾತ್ರ ಎಲ್ಲರಿಗೂ ಇಷ್ಟವಾಗಲಿದೆ’ ಎಂದರು.

ನಿರ್ದೇಶಕ ಶಂಕರ್ ಜಿ ಮಾತನಾಡಿ ಇದೊಂದು ಸಸ್ಪೆನ್ಸ್-ಕ್ರೈಂ ಥ್ರಿಲ್ಲರ್ ಕಥಾಹಂದರದ ಸಿನಿಮಾ. ಸಿನಿಮಾದ ಕೊನೆಯಲ್ಲೊಂದು ಸಂದೇಶವಿದೆ. ಎಲ್ಲಾ ಥರದ ಆಡಿಯನ್ಸ್‍ಗೂ ಇಷ್ಟವಾಗುವ ಸಿನಿಮಾ ಮಾಡಿದ್ದೇವೆ. ಲವ್, ಸೆಂಟಿಮೆಂಟ್, ಆಕ್ಷನ್ ಹೀಗೆ ಎಲ್ಲಾ ಥರದ ಎಲಿಮೆಂಟ್ಸ್ ಸಿನಿಮಾದಲ್ಲಿದೆ. ಚಿತ್ರದುರ್ಗ, ಬೆಂಗಳೂರು, ಹೊಸಪೇಟೆ ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸೆನ್ಸಾರ್ ನಿಂದ ಸಿನಿಮಾಕ್ಕೆ `ಯು’ ಸರ್ಟಿಫಿಕೇಟ್ ಸಿಕ್ಕಿದೆ’ ಎಂದು ಹೇಳಿದರು

ನಿರ್ಮಾಪಕ ಡಾ. ಮಹಂತೇಶ್ ಹೆಚ್. ಮಾತನಾಡಿ, ಆರಂಭದಲ್ಲಿ ಅಂದುಕೊಂಡಂತೆ, ಸಿನಿಮಾ ತುಂಬ ಚೆನ್ನಾಗಿ ಬಂದಿದೆ. ಚಿತ್ರದುರ್ಗದ ಮೂಲದ ಬಹುತೇಕ ಹೊಸ ಪ್ರತಿಭೆಗಳಿಗಾಗಿ ಸಿನಿಮಾ ಮಾಡಿದ್ದೇವೆ. ಆದಷ್ಟು ಬೇಗಮಾಯಾವಿ’ಚಿತ್ರವನ್ನು ತೆರೆಗೆ ತರಲಿದ್ದೇವೆ’ ಎಂದರು

ನಟ ಸೂರ್ಯ ಪ್ರವೀಣ್, ಸುರೇಶ ಬಾಬು, ಸಾಹಸ ನಿರ್ದೇಶಕ ವಿಕ್ರಂ ಮೋರ್ ಮೊದಲಾದವರು `ಮಾಯಾವಿ’ಯ ಕುರಿತು ತಮ್ಮ ಅನಿಸಿಕೆ, ಅನುಭವಗಳನ್ನು ಹಂಚಿಕೊಂಡರು.

`ಮಾಯಾವಿ’ ಚಿತ್ರದ ಎರಡು ಹಾಡುಗಳಿಗೆ ಅಗಸ್ತ್ಯ ಸಂತೋಷ್ ಸಂಗೀತ ಸಂಯೋಜಿಸಿದ್ದು ವಿಜಯ ಪ್ರಕಾಶ್, ಮೇಘನಾ ಮತ್ತಿತರರು ಹಾಡುಗಳಿಗೆ ಧ್ವನಿಯಾಗಿದ್ದಾರೆ.ಗುರುದತ್ತ ಮುಸುರಿ ಛಾಯಾಗ್ರಹಣ, ಅನಿಲ್ ಕುಮಾರ್ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin