“ಮಾರುತ” ಚಿತ್ರದ “ನಮ್ಮಮ್ಮ ಸವದತ್ತಿ ಎಲ್ಲಮ್ಮ ಹಾಡು ಬಿಡುಗಡೆ - CineNewsKannada.com

“ಮಾರುತ” ಚಿತ್ರದ “ನಮ್ಮಮ್ಮ ಸವದತ್ತಿ ಎಲ್ಲಮ್ಮ ಹಾಡು ಬಿಡುಗಡೆ

ಮಾರುತ ಚಿತ್ರದ “ನಮ್ಮಮ್ಮ ಸವದತ್ತಿ ಎಲ್ಲಮ್ಮ” ಎಂಬ ಹಾಡು ಬಿಡುಡಗೆಯಾಗಿದೆ. ಅನನ್ಯ ಭಟ್ ಗಾಯನದಲ್ಲಿ ಮೂಡಿ ಬಂದಿರುವ ಈಹಾಡಿನಲ್ಲಿ ನಾಯಕಿ ಬೃಂದಾ ಆಚಾರ್ಯ ಅಭಿನಯಿಸಿದ್ದಾರೆ. ನಿರ್ದೇಶಕ ಎಸ್ ನಾರಾಯಣ್ ಅವರೆ ಬರೆದು ಸಂಗೀತ ಸಂಯೋಜಿಸಿರುವ ಹಾಡು ಇದಾಗಿದೆ. ಭಕ್ತಿ ಪ್ರಧಾ ಹಾಡಿನ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

ಹೆಸರಾಂತ ನಿರ್ದೇಶಕ ಡಾ.ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ನಿರ್ಮಿಸಿರುವ ಚಿತ್ರ ಇದು

ಈ ವೇಳೆ ಮಾತನಾಡಿದ ನಿರ್ದೇಶಕ ಎಸ್.ನಾರಾಯಣ್ ರೈಲಿಗೆ ಎಂಜಿನ್ ಹೇಗೆ ಮುಖ್ಯವೊ ಹಾಗೆ ಚಿತ್ರದ ಬಹು ಮುಖ್ಯ ಪಾತ್ರಕ್ಕೆ ಪ್ರಮುಖ ಕಲಾವಿದರೊಬ್ಬರು ಬೇಕಾಗಿತ್ತು. ಪಾತ್ರದಲ್ಲಿ ದುನಿಯಾ ವಿಜಯ್ ಅಭಿನಯಿಸಿದ್ದಾರೆ. ವಿಜಯ್ ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ. ಶ್ರೇಯಸ್ ಮಂಜು, ಬೃಂದಾ ಆಚಾರ್ಯ ಅಭಿನಯ ಕೂಡ ಚೆನ್ನಾಗಿದೆ. ನಮ್ಮ ಚಿತ್ರದಲ್ಲಿ ತಾರಾ, ರಂಗಾಯಣ ರಘು, ಸಾಧುಕೋಕಿಲ, ಕಲ್ಯಾಣಿ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಅತಿಥಿಪಾತ್ರದಲ್ಲಿ ಅಭಿನಯಿಸಿದ್ದಾರೆ ಎಂದರು.

“ಮಾರುತ”, ನೋಡುಗರಿಗೆ ಬೇಕಾಗಿರುವ ಎಲ್ಲಾ ಅಂಶಗಳನ್ನೊಳಗೊಂಡ ಕೌಟುಂಬಿಕ ಚಿತ್ರ. ಚಿತ್ರದಲ್ಲಿ ಇಷ್ಟು ಮಾತ್ರ ಅಲ್ಲ. ಯುವಜನತೆಗೆ ಎಚ್ಚರ ನೀಡುವ ಉತ್ತಮ ಸಂದೇಶ ಸಹ ಇದೆ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಉಪಯೋಗವಿದೆಯೊ, ಅದಕ್ಕಿಂತ ಹೆಚ್ಚು ಅಪಾಯವಿದೆ. ನಿಟ್ಟಿನಲ್ಲಿ ಪೋಷಕರು ಯುವಜನತೆಯ ಮೇಲೆ ಹೆಚ್ಚು ಗಮನ ನೀಡಬೇಕು ಎಂಬ ಸಂದೇಶ ಸಹ ಇದೆ. ಅಕ್ಟೋಬರ್ 31 ಕ್ಕೆ ಚಿತ್ರ ತೆರೆಗೆ ಬರಲಿದೆ ಎಂದು ಮಾಹಿತಿ ನೀಡಿದರು.

ನಟ ಶ್ರೇಯಸ್ ಮಂಜು ಮಾತನಾಡಿ ನಿರ್ದೇಶಕ ಎಸ್ ನಾರಾಯಣ್ ಅವರ ಶಿಸ್ತು ಎಲ್ಲರಿಗೂ ಮಾದರಿ.ಅವರಿಂದ ಚಿತ್ರದಲ್ಲಿ ಸಾಕಷ್ಟು ಕಲಿತಿದ್ದೇನೆ.ನವರಾತ್ರಿಯ ಸಂದರ್ಭದಲ್ಲಿ ನಾಡಿನ ಜನತೆಗೆ ಒಂದೊಳ್ಳೆ ಭಕ್ತಿಗೀತೆಯನ್ನು ನಿರ್ದೇಶಕರು ನೀಡಿದ್ದಾರೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಕ್ಟೋಬರ್ 31 ರಂದು ತೆರೆಗೆ ಬರುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದರು

ನಿರ್ಮಾಪಕ ಕೆ.ಮಂಜು ಮಾತನಾಡಿ ಎಸ್ ನಾರಾಯಣ್ ಹಾಗೂ ದುನಿಯಾ ವಿಜಯ್ ಜೊತೆಗೆ ಮೂರನೇ ಚಿತ್ರ. ಸ್ನೇಹಿತರಾದ ರಮೇಶ್ ಯಾದವ್ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದೇನೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ ಕಥೆಯನ್ನು ನಿರ್ದೇಶಕರು ಮಾಡಿಕೊಂಡಿದ್ದಾರೆ. ಮಗ ಶ್ರೇಯಸ್ ಕೂಡ ಚಿತ್ರದಲ್ಲಿ ನಟಿಸಿದ್ದಾನೆ. ಮೇಲಿನ ಪ್ರೀತಿಯಿಂದ ದುನಿಯಾ ವಿಜಯ್, ರವಿಚಂದ್ರನ್ ಸೇರಿದಂತೆ ಅನೇಕ ಹಿರಿಯ ಕಲಾವಿದರು. ಚಿತ್ರದಲ್ಲಿ ಅಭಿನಯಿಸಿದ್ದಾರೆ. “ನಮ್ಮಮ್ಮ ಸವದತ್ತಿ ಎಲ್ಲಮ್ಮ” ಹಾಡಿನ ಒಂದು ದಿನದ ಚಿತ್ರೀಕರಣಕ್ಕೆ ಸುಮಾರು 65ಲಕ್ಷ ಖರ್ಚಾಗಿದೆ. ತೆರೆಯ ಮೇಲೆ ಈ ಹಾಡು ಅದ್ದೂರಿಯಾಗಿ ಮೂಡಿಬಂದಿದೆ ಎಂದರು.

ನಿರ್ಮಾಪಕ ರಮೇಶ್ ಯಾದವ್ ಮಾತನಾಡಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರವನ್ನು ಕೆ.ಮಂಜು ಅವರ ಜೊತೆಗೂಡಿ ನಿರ್ಮಿಸಿರುವುದಕ್ಕೆ ಬಹಳ ಖುಷಿಯಿದೆ. “ನಮ್ಮಮ್ಮ” ಹಾಡು ನಾಡಿನ ಜನರ ಮನ ಗೆದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ ಎಂದು ಹೇಳಿದರು

ನಟಿ ಬೃಂದಾ ಆಚಾರ್ಯ ಮಾತನಾಡಿ ಶಿಸ್ತು, ಸಂಯಮಕ್ಕೆ ಹೆಸರಾದವರು ನಿರ್ದೇಶಕ ಎಸ್ ನಾರಾಯಣ್. ಅವರಿಂದ= ಕಲಿತಿದ್ದು ಬಹಳ. “ನಮ್ಮಮ್ಮ” ಹಾಡನ್ನು ಎರಡು ದಿನಗಳ ಕಾಲ ಚಿತ್ರಿಸುವುದಾಗಿ ಯೋಜನೆಯಾಗಿತ್ತು. ನಿರ್ದೇಶಕರು ಅವಧಿಗೂ ಮುನ್ನ ಚಿತ್ರೀಕರಣ ಮುಗಿಸಿದರು. ಅಕ್ಟೋಬರ್ 31 ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin