ಶಿವರಾಜ್‍ಕುಮಾರ್ ಅಭಿನಯದ `ಡ್ಯಾಡ್’ ಚಿತ್ರದ ಪೋಸ್ಟರ್ ಬಿಡುಗಡೆ - CineNewsKannada.com

ಶಿವರಾಜ್‍ಕುಮಾರ್ ಅಭಿನಯದ `ಡ್ಯಾಡ್’ ಚಿತ್ರದ ಪೋಸ್ಟರ್ ಬಿಡುಗಡೆ

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ಡ್ಯಾಡ್” ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದ ಅಪ್ಪ ಮಗಳು ಇರುವ ಪೋಸ್ಟರ್ ಗಮನ ಸೆಳೆದಿದೆ

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರಕ್ಕೆ ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದೆ. ಮೈಸೂರು, ನಂದಿ ಬೆಟ್ಟದಲ್ಲಿ ಚಿತ್ರೀಕರಣ ನಡೆದಿದೆ.

ಹರೀಶ್ ಪೆದ್ದಿ ಚಿತ್ರ ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವರಾಜ್‍ಕುಮಾರ್ ಅನೇಕ ವರ್ಷಗಳ ನಂತರ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಛಾಯಾಗ್ರಹಣವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin