3 thousand crore investment in next 5 years: Producer Vijay Kirangadur

ಹೊಸ ವರ್ಷದಲ್ಲಿ ಹೊಸ ಯೋಜನೆ ಪ್ರಕಟಿಸಿದ ಹೊಂಬಾಳೆ ಫಿಲಮ್ಸ್ - CineNewsKannada.com

ಹೊಸ ವರ್ಷದಲ್ಲಿ ಹೊಸ ಯೋಜನೆ ಪ್ರಕಟಿಸಿದ ಹೊಂಬಾಳೆ ಫಿಲಮ್ಸ್

ಮನರಂಜನಾ ಕ್ಷೇತ್ರದಲ್ಲಿ ಮುಂದಿನ 5 ವರ್ಷದಲ್ಲಿ ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಹೊಂಬಾಳೆ ಫಿಲಮ್ಸ್ ನ ವಿಜಯ್ ಕಿರಗಂದೂರು ಪ್ರಕಟಿಸಿದ್ದಾರೆ.

ಸಂಸ್ಥೆ ನಿರ್ಮಾಣ ಮಾಡಿದ್ದ ಕೆಜಿಎಫ್ – 2 ಚಿತ್ರ 1200 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ ಮತ್ತು ಕಾಂತಾರ 400 ಕೋಟಿ ಹಣ ಸಂಗ್ರಹ ಮಾಡಿದ ಹಿನ್ನೆಲೆಯಲ್ಲಿ ಇನ್ನು ಹೆಜ್ಜೆ ಮುಂದೆ ಹೋಗಿ ಮನರಂಜನಾ ಕ್ಷೇತ್ರದಲ್ಲಿ 3,000 ಕೋಟಿ ಬಂಡವಾಳ ಹೂಡುವುದಾಗಿ ಅವರು ಪ್ರಕಟಿಸಿದ್ದಾರೆ.

ಹೊಸ ವರ್ಷದ ಜನರಿಗೆ ಶುಭ ಕೋರಿ ಟ್ವಿಟ್ಟರ್ ನಲ್ಲಿ ನಿರ್ಮಾಪಕ ವಿಜಯ್ ಕಿರಂಗದೂರು ಈ ವಿಷಯ ಪ್ರಕಟಿಸಿದ್ದಾರೆ

vijay Kirangdur

ಕಳೆದ ವರ್ಷ ನಮ್ಮನ್ನು ಬೆಂಬಲಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ನಾಡಿನ ಸಮಸ್ತ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನೂತನ ವರ್ಷದಲ್ಲಿ ನವ ಸಂಕಲ್ಪದೊಂದಿಗೆ ಬೃಹತ್ ಯೋಜನೆ ಘೋಷಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಚಿತ್ರ ಪ್ರೇಮಿಗಳ ಪ್ರೀತಿ ಮತ್ತು ಪ್ರೋತ್ಸಾಹದ ಫಲವಾಗಿ ಹೊಂಬಾಳೆ ಫಿಲಮ್ಸ್ ಅತ್ಯಂತ ಯಶಸ್ವಿ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದು, ಈ ಯಶಸ್ವೀ ಪರಂಪರೆ ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ..

ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ , ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನು ನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ಬದ್ಧರಾಗಿದ್ದು , ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin