4 n 6 ಚಿತ್ರದ ಪೋಸ್ಟರ್ ಪ್ರಿಯಾಂಕಾ ಉಪೇಂದ್ರ ಬಿಡುಗಡೆ

ಮರ್ಡರ್ ಮಿಸ್ಟ್ರಿ ಜೊತೆಗೆ ಸಸ್ಪೆನ್ಸ್ , ಥ್ರಿಲ್ಲರ್ ಕಥಾಹಂದರ ಹೊಂದಿರುವ 4 n 6 ಚಿತ್ರದ ಚಿತ್ರೀಕರಣ ಮುಗಿದು ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ.
ಲವ್ ಮಾಕ್ಟೇಲ್ ಹಾಗೂ ಲವ್ 360 ಚಿತ್ರಗಳ ಖ್ಯಾತಿಯ ರಚನಾ ಇಂದರ್ ಒಬ್ಬ ಡಿಟೆಕ್ಟಿವ್ ಆಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ “4 n 6” ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಅವರು ಆಕ್ಷನ್ ಕಟ್ ಹೇಳಿದ್ದಾರೆ. ಇತ್ತೀಚೆಗೆ ನಟಿ ಪ್ರಿಯಾಂಕಾ ಉಪೇಂದ್ರ ಅವರು ‘4 n 6’ ಚಿತ್ರದ ಅಫೀಷಿಯಲ್ ಪೋಸ್ಟರ್ ಬಿಡುಗಡೆ ಮಾಡಿ, ಡಿಟೆಕ್ಟಿವ್ ಕಂಟೆಂಟ್ ಚಿತ್ರಗಳು ತುಂಬಾ ಇಂಟರೆಸ್ಟಿಂಗ್ ಆಗಿರುತ್ತದೆ, ನಾಯಕಿ ರಚನಾ ಚೆನ್ನಾಗಿ ನಟಿಸಿರುತ್ತಾರೆ. ಪೋಸ್ಟರ್ ಕೂಡ ಪ್ರಾಮಿಸಿಂಗ್ ಆಗಿದೆ ಎಂದು ಶುಭ ಹಾರೈಸಿದ್ದಾರೆ.
ಒಂದು ಮರ್ಡರ್ ಮಿಸ್ಟರಿ ಸುತ್ತ ನಡೆಯುವ ಕುತೂಹಲಕರ ತನಿಖೆಯ ಹಂತವೇ ಈ ಚಿತ್ರದ ಕಥಾವಸ್ತು. ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಕರಣ್ ಸಿಂಗ್ ಅವರು ನಿರ್ಮಿಸಿದ್ದಾರೆ. ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಚರಣ್ ತೇಜ್ ಅವರ ಛಾಯಾಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ನಿರ್ದೇಶನವಿದೆ. ಹೊಸ ಪ್ರತಿಭೆಗಳಾದ ನವೀನ್ ಕುಮಾರ್ ಮೇಘನಾ, ಸಂಜಯ್ ನಾಯಕ್, ಸೌರವ್, ಸತ್ಯ ಹಾಗೂ ರೇಣುಕಾ ಹಾಗೂ ಇತರರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ