ಉಪೇಂದ್ರ ಹುಟ್ಟುಹಬ್ಬಕ್ಕೆ “45” ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ

ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ” 45″ ಬಿಡುಗಡೆಯ ಸನಿಹಕ್ಕೆ ಬಂದಿದೆ. ಹೀಗಾಗಿ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಹೆಚ್ಚು ಮಾಡಿದೆ.

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕನ್ನಡದ ಸದಭಿರುಚಿಯ ಚಿತ್ರ ನಿರ್ಮಾಪಕ ರಮೇಶ್ ರೆಡ್ಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.ನಟ ಉಪೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ನಟ ಉಪೇಂದ್ರ ಅವರ ” 45″ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ನಟ ಉಪೇಂದ್ರ ಅವರ ಹುಟ್ಟುಹಬ್ಬದ ವೇಳೆ ನಿರ್ಮಾಪಕ ರಮೇಶ್ ರೆಡ್ಡಿ,ನಿರ್ದೇಶಕ ಅರ್ಜುನ್ ಜನ್ಯ ಅವರು ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ. ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.
ಸೆಪ್ಟೆಂಬರ್ 18, ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ.

ಉಪೇಂದ್ರ ಅವರ ನಿವಾಸಕ್ಕೆ “45” ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ನಟ ಶಿವರಾಜ್ ಕುಮಾರ್ ಮತ್ತು ನಟ ರಾಜ್ ಬಿ ಶೆಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಪೇಂದ್ರ, ಶಿವರಾಜ್ ಕುಮಾರ್ ಅವರ ಕಾಂಬಿನೇಷನ್ ನಲ್ಲಿ ಬಹಳವರ್ಷದ ನಂತರ ಚಿತ್ರ ತೆರೆಗೆ ಬರುತ್ತಿರುವುದು ಇಬ್ಬರು ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಮತ್ತು ಕುತೂಹಲ ಹೆಚ್ಚು ಮಾಡಿದೆ.
