50 days of 'Krishnam Pranaya Sakhi': Theaters are like temples: Golden Star Ganesh Golden

” ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ 50 ದಿನದ ಸಂಭ್ರಮ: ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ: ಗೋಲ್ಡನ್ ಸ್ಟಾರ್ ಗಣೇಶ್ ಗೋಲ್ಡನ್ - CineNewsKannada.com

” ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ 50 ದಿನದ ಸಂಭ್ರಮ: ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ: ಗೋಲ್ಡನ್ ಸ್ಟಾರ್ ಗಣೇಶ್ ಗೋಲ್ಡನ್

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ “ಕೃಷ್ಣಂ ಪ್ರಯಣ ಸಖಿ” ಚಿತ್ರ 50 ದಿನ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಸಂಭ್ರಮ ಹಮ್ಮಿಕೊಂಡಿತ್ತು. ನಟ ಗಣೇಶ್, ಹಿರಿಯ ನಟ ಶಶಿಕುಮಾರ್, ನಿರ್ದೇಶಕ ಶ್ರೀನಿವಾಸ್ ರಾಜು ಸೇರಿದಂತೆ ತಂಡ ಭಾಗಿಯಾಗಿ ಗೆಲುವಿಗೆ ಕಾರಣರಾದ ಚಿತ್ರತಂಡದವರನ್ನು ನಿರ್ಮಾಪಕರು ಸ್ಮರಣಿಕೆ ನೀಡಿ ಗೌರವಿಸಿದರು.

ಈ ವೇಳೆ ಮಾತಿಗಿಳಿದ ನಟ ಗಣೇಶ್ ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ. ಅಲ್ಲಿಗೆ ಬರುವ ಪ್ರೇಕ್ಷಕರು ದೇವರುಗಳು ಪ್ರೇಕ್ಷಕರ ಮನ ಗೆದ್ದರೆ, ನಾವು ಗೆದ್ದ ಹಾಗೆ. ಐದು ದಿನ, ಏಳು ದಿನ ಅಂತ ಲೆಕ್ಕ ಹಾಕುತ್ತಿರುವ ಈ ಸಂದರ್ಭದಲ್ಲಿ ಚಿತ್ರವೊಂದು ಐವತ್ತು ದಿನಗಳು ಪೂರೈಸಿರುವುದು ಸುಲಭದ ಮಾತಲ್ಲ. ಈ ಗೆಲುವನ್ನು ನಾನು ಕನ್ನಡ ಕಲಾಭಿಮಾನಿಗಳಿಗೆ ಅರ್ಪಿಸುತ್ತೇನೆ. ನಿರ್ದೇಶಕರಿಗೆ, ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಚಿತ್ರದ ಮೊದಲ ಹಾಡು ಮೈಸೂರಿನಲ್ಲೇ ಬಿಡುಗಡೆಯಾಗಿತ್ತು. ಆಗ ನಾನು ಹೇಳಿದ್ದೆ. ಐವತ್ತನೇ ದಿನದ ಸಮಾರಂಭವನ್ನು ಮೈಸೂರಿನಲ್ಲೇ ಮಾಡೋಣ ಅಂತ. ಆ ಮಾತು ನಿಜವಾಗಿರುವುದಕ್ಕೆ ಖುಷಿಯಾಗಿದೆ ಎಂದರು.

ನಿರ್ದೇಶಕ ಶ್ರೀನಿವಾಸರಾಜು ಮಾತನಾಡಿ ಸಿಂಗಲ್ ಥಿಯೇಟರ್ ಗೆ ಜನರು ಬರುತ್ತಿಲ್ಲ ಎಂಬ ಸಂದರ್ಭದಲ್ಲಿ ನಮ್ಮ “ಕೃಷ್ಣಂ ಪ್ರಣಯ ಸಖಿ” ಚಿತ್ರ ಸಿಂಗಲ್ ಥಿಯೇಟರ್ ನಲ್ಲೇ ಐವತ್ತು ದಿನ ಪೂರೈಸಿರುವುದು ಖುಷಿಯಾಗಿದೆ. ಹಾಗಾಗಿ ಸಮಾರಂಭವನ್ನು ಇಲ್ಲೇ ಆಯೋಜಿಸಿದ್ದೇವೆ.

ಇನ್ನು ಈ ಚಿತ್ರ ಐವತ್ತು ದಿನ ಯಶಸ್ವಿಯಾಗಿ ಪೂರೈಸಲು ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ, ನಾಯಕ ಗಣೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಛಾಯಾಗ್ರಾಹಕ ವೆಂಕಟ್ ರಾಮಪ್ರಸಾದ್ ಪ್ರಮುಖ ಕಾರಣ. ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು

ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಮಾತನಾಡಿ ತನ್ನ ಚಿತ್ರ ಐವತ್ತು ದಿನಗಳನ್ನು ಪೂರೈಸಿದೆ ಎಂಬ ಖುಷಿಗಿಂತ ಮತ್ತೇನು ಬೇಕು. ಈ ಸಂದರ್ಭದಲ್ಲಿ ನನ್ನ ಇಡೀ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದರು

ಹಿರಿಯ ನಟ ಶಶಿಕುಮಾರ್, ಗಿರಿ ಶಿವಣ್ಣ, ನಟಿ ಶರಣ್ಯ ಶೆಟ್ಟಿ, ಡಾ.ವಿ.ನಾಗೇಂದ್ರಪ್ರಸಾದ್, ಡಿಫರೆಂಟ್ ಡ್ಯಾನಿ , ಕಾರ್ಯಕಾರಿ ನಿರ್ಮಾಪಕ ಶರತ್ ಭೋಜರಾಜ್ ಮುಂತಾದವರು “ಕಷ್ಣಂ ಪ್ರಣಯ ಸಖಿ” ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin