50 years of Dr. Vishnavardhan in cinema: to the Asia Book of Records

ಸಿನಿರಂಗದಲ್ಲಿ ಡಾ.ವಿಷ್ಣುವರ್ಧನ್ ಗೆ 50 ವರ್ಷ: ಏಷ್ಯಾ ಬುಕ್ ಆಫ್ ರೆಕಾರ್ಡ್‍ಗೆ - CineNewsKannada.com

ಸಿನಿರಂಗದಲ್ಲಿ ಡಾ.ವಿಷ್ಣುವರ್ಧನ್ ಗೆ  50 ವರ್ಷ: ಏಷ್ಯಾ ಬುಕ್ ಆಫ್ ರೆಕಾರ್ಡ್‍ಗೆ

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನೆಲೆಯಲ್ಲಿ 50 ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ನೇತೃತ್ವದಲ್ಲಿ ನಡೆಸಿದ ಕಾರ್ಯಕ್ರಮ ಏಷ್ಯಾ ಬುಕ್ ಆಫ್ ರೆಕಾರ್ಡ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲು ಪಡೆದಿದೆ,

ವೀರಕಪುತ್ರ ಶ್ರೀನಿವಾಸ ನೇತೃತ್ವದಲ್ಲಿ 2022 ರ ಸೆಪ್ಟೆಂಬರ್ 18 ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್ ಕಟೌಟ್ ಸ್ಥಾಪಿಸಿ “ಕಟೌಟ್ ಜಾತ್ರೆ” ಎಂಬ ಕಾರ್ಯಕ್ರಮ ಆಯೋಜಿಲಾಗಿತ್ತು. ಆ ಕಟೌಟ್‍ಗಳಿಗೆ ಬೃಹತ್ ಹಾರಗಳನ್ನು ಸಹ ಹಾಕಿಸಿದ್ದರು. ಇಡೀ ಕಾರ್ಯಕ್ರಮಕ್ಕೆ ಅಂದಾಜು 40 ಲಕ್ಷದಷ್ಟು ಹಣ ಖರ್ಚಾಗಿತ್ತು. ಪೆÇಲೀಸ್ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್ ಜಾತ್ರೆಯಲ್ಲಿ ಭಾಗವಹಿಸಿದ್ದರು.

ಕಟೌಟ್ ಜಾತ್ರೆ ಏಷ್ಯಾ ಬುಕ್ ಆಫ್ ರೆಕಾರ್ಡ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಿಸಲು ಮನವಿ ಸಲ್ಲಿಸಲಾಗಿತ್ತು. ಆ ಸಂಸ್ಥೆಗಳು ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ಇದೀಗ ಆ ಎಲ್ಲಾ ಹಂತದ ಪರೀಕ್ಷೆಗಳೂ ಮುಗಿದಿದ್ದು, ಈ ಕಟೌಟ್ ಜಾತ್ರೆಯು ಏಷ್ಯಾ ಬುಕ್ ಆಫ್ ರೆಕಾರ್ಡ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆಯಾಗಿ ದಾಖಲೆಯಾಗಿದೆ. ಆ ಎರಡೂ ದಾಖಲೆಗಳ ಸರ್ಟಿಫಿಕೇಟ್ ಮತ್ತು ಪದಕಗಳು ನೀಡಿವೆ ವೀರಕಪುತ್ರ ಶ್ರೀನಿವಾಸ ಮಾಹಿತಿ ಹಂಚಿಕೊಂಡಿದ್ದಾರೆ

ತೆರೆಮುಂದೆ ತೆರೆಹಿಂದೆ ನುಡಿದಂತೆ ನಡೆದ ಮೇರುನಟನ ಹೆಸರಲ್ಲಿ ಇಂತಹದ್ದೊಂದು ದಾಖಲೆಯನ್ನು ಅವರಿಲ್ಲದ ಹೊತ್ತಿನಲ್ಲಿ ಸ್ಥಾಪಿಸಲು ಸಾಧ್ಯವಾಗಿದ್ದಕ್ಕೆ ನಿಜಕ್ಕೂ ಹೆಮ್ಮೆಪಡುತ್ತೇವೆ. ಈ ದಾಖಲೆಯು ಡಾ.ವಿಷ್ಣುವರ್ಧನ್ ಅವರ ಅಗಲಿಕೆಯ 13 ವರ್ಷಗಳ ನಂತರವೂ ಅವರ ನೆನಪನ್ನು ಹಸಿರಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ನಿರಂತರವಾಗಿ ಮಾಡುತ್ತಿರುವುದರ ದ್ಯೋತಕವಾಗಿದೆ ಎಂದಿದ್ಧಾರೆ

ಈ ಕಟೌಟ್ ಜಾತ್ರೆಗೆ ಬೆನ್ನೆಲುಬಾಗಿ ನಿಂತ 50 ಸೇನಾನಿಗಳಿಗೆ, ಯೋಜನೆ ಕಾರ್ಯಸಾಧುಗೊಳಿಸಿದ ಆನಂದ್ ರಾಚ್, ಕಟೌಟ್ ವಿನ್ಯಾಸ ಮಾಡಿದ ರಾಜುವಿಷ್ಣು ಮತ್ತು ಈ ಸಂಸ್ಥೆಗಳ ಜೊತೆ ಸಂವಹನ ನಡೆಸಿ, ಸಾಧ್ಯವಾಗಿಸಿದ ಸಾಹಿತಿ ಜನಾರ್ಧನ್ ರಾವ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಲು ಇಚ್ಚಿಸುವುದಾಗಿ ತಿಳಿಸಿದ್ದಾರೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin