A successful seventh week for popular hit "Judgment".

ಜನಮೆಚ್ಚಿದ “ಜಡ್ಜ್ ಮೆಂಟ್” ಗೆ ಯಶಸ್ವಿ ಏಳನೇ ವಾರ” . - CineNewsKannada.com

ಜನಮೆಚ್ಚಿದ “ಜಡ್ಜ್ ಮೆಂಟ್” ಗೆ ಯಶಸ್ವಿ ಏಳನೇ ವಾರ” .

ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಗುರುರಾಜ್ ಕುಲಕರ್ಣಿ ನಾಡಗೌಡ ನಿರ್ದೇಶನದ “ದ ಜಡ್ಜ್ ಮೆಂಟ್” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರ ಏಳನೇ ವಾರಕ್ಕೆ ಕಾಲಿಟ್ಟಿದೆ.

V Ravichandran

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಯಶಸ್ವಿಯಾಗುತ್ತದೆ ಎಂಬ ಮಾತಿಗೆ “ದಿ ಜಡ್ಜ್ ಮೆಂಟ್” ಚಿತ್ರ ಉದಾಹರಣೆಯಾಗಿದೆ. ಅದ್ದೂರಿ ತಾರಾಬಳಗದಲ್ಲಿ ಮೂಡಿಬಂದ ಈ ಚಿತ್ರವನ್ನು ಪ್ರೇಕ್ಷಕರು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ಬಿಡುಗಡೆಯಾಗಿ ಏಳನೇ ವಾರದಲ್ಲೂ ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿರುವ ಈ ಚಿತ್ರವನ್ನು ಈಗಲೂ ಪ್ರೇಕ್ಷಕರು ಕುಟುಂಬ ಸಮೇತ ಬಂದು ನೋಡುತ್ತಿರುವುದು ಖುಷಿಯ ವಿಚಾರ. ಚಿತ್ರವನ್ನು ಯಶಸ್ವಿಗೊಳಿಸಿದ ಚಿತ್ರತಂಡಕ್ಕೆ ಹಾಗೂ ಪ್ರೇಕ್ಷಕರಿಗೆ ನಿರ್ದೇಶಕ ಗುರುರಾಜ್ ಕುಲಕರ್ಣಿ ಧನ್ಯವಾದ ತಿಳಿಸಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್, ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

V Ravichandran

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಕೆಂಪರಾಜ್ ಅವರ ಸಂಕಲನವಿರುವ ಈ ಚಿತ್ರವನ್ನು ಗುರುರಾಜ್ ಕುಲಕರ್ಣಿ (ನಾಡಗೌಡ), ಶರದ್ ನಾಡಗೌಡ, ವಿಶ್ವನಾಥ್ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ್, ಪ್ರತಿಮಾ ಬಿರಾದಾರ್ ನಿರ್ಮಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin