A year-round celebration of birth centenary of comedy king TR Narasimha Raju

ವರ್ಷ ಪೂರ್ತಿ ಹಾಸ್ಯ ಚಕ್ರವರ್ತಿ ಟಿ.ಆರ್ ನರಸಿಂಹರಾಜು ಜನ್ಮ ಶತಮಾನೋತ್ಸವ ಆಚರಣೆ - CineNewsKannada.com

ವರ್ಷ ಪೂರ್ತಿ ಹಾಸ್ಯ ಚಕ್ರವರ್ತಿ ಟಿ.ಆರ್ ನರಸಿಂಹರಾಜು ಜನ್ಮ ಶತಮಾನೋತ್ಸವ ಆಚರಣೆ

ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳದಿರುವವರು ಖ್ಯಾತ ಹಾಸ್ಯ ನಟ ದಿ.ಟಿ.ಆರ್ ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ ಜುಲೈ 24ರಂದು. ಈ ಸಂಭ್ರಮವನ್ನು ನರಸಿಂಹರಾಜು ಜನ್ಮ ಶತಮಾನೋತ್ಸವ ಎಂಬ ಹೆಸರಿನಿಂದ ವರ್ಷವಿಡೀ ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಈ ಕಾರ್ಯಕ್ರಮಗಳ ಪೈಕಿ ಮೊದಲನೆಯದಾಗಿ ನರಸಿಂಹರಾಜು ಅವರನ್ನು ಈಗಿನ ಯುವಜನತೆಗೆ ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ.

ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ.

ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ (ಹಾಸ್ಯದ ಕುರಿತು) ಆಯೋಜಿಸಲಾಗುವುದು. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ದೊಡ್ಡಮಟ್ಟದ ಸಮಾರಂಭ ಆಯೋಜಿಸಿ, ಆ ಕಾರ್ಯಕ್ರಮದಲ್ಲಿ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವದ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ. ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ). ಆಯೋಜಿಸಲಾಗುವುದು.

ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಈಗಲೂ ನಾಟಕ ಕಂಪನಿಗಳಿದೆ. ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ಜನಪ್ರಿಯ ನಾಟಕಗಳನ್ನು ಸೂರ್ಯಾಸ್ತದಿಂದ ಸೂರ್ಯೋದಯದವರೆಗೂ ಆಯೋಜಿಸುವ ಯೋಜನೆಯಿದೆ. ಹೀಗೆ ಇನ್ನೂ ಹಲವಾರು ಕಾರ್ಯಕ್ರಮಗಳ ಮೂಲಕ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಯುತ್ತಿದೆ .

ಈ ಎಲ್ಲಾ ಕಾರ್ಯಕ್ರಮಗಳಿಗೆ ಜುಲೈ 24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು, ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ತಿಳಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin