Abhiramchandra Trailer Released: The movie will release on October 6

ಅಭಿರಾಮಚಂದ್ರ ಟ್ರೇಲರ್ ಬಿಡುಗಡೆ: ಅಕ್ಟೋಬರ್ 6ಕ್ಕೆ ಸಿನಿಮಾ ತೆರೆಗೆ - CineNewsKannada.com

ಅಭಿರಾಮಚಂದ್ರ ಟ್ರೇಲರ್ ಬಿಡುಗಡೆ: ಅಕ್ಟೋಬರ್ 6ಕ್ಕೆ ಸಿನಿಮಾ ತೆರೆಗೆ

ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾಗೇಂದ್ರ ಗಾಣಿಗ ನಿರ್ದೇಶನ ಅಭಿರಾಮಚಂದ್ರ ಸಿನಿಮಾ ಅಕ್ಟೋಬರ್ 6ಕ್ಕೆ ಬಿಡುಗಡೆಯಾಗುತ್ತಿದೆ. ಈ ಕುರಿತ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ಹಂಚಿಕೊಂಡರು.

ನಟ ಪ್ರಮೋದ್ ಶೆಟ್ಟಿ ಮಾತನಾಡಿ, ಸಿನಿಮಾ ತುಂಬಾ ಅದ್ಭುತವಾಗಿ ಮೂಡಿದೆ. ನನಗೆ ಇಷ್ಟವಾದ ಪಾರ್ಟ್ ಯಾವುದು ಅಂದರೆ ಕುಂದಾಪುರ ಕನ್ನಡವನ್ನು ಸಿನಿಮಾದಲ್ಲಿ ಬಳಸಲು ಮೀಟರ್ ಬೇಕು. ಆ ಮೀಟರ್ ಅಭಿರಾಮಚಂದ್ರ ಸಿನಿಮಾದಲ್ಲಿ ಚೆನ್ನಾಗಿ ತೋರಿಸಿದ್ದಾರೆ. ಯಾಕೆಂದರೆ ತುಂಬಾ ಜನರಿಗೆ ಆ ಭಾಷೆ ಅರ್ಥವಾಗಲ್ಲ. ತುಂಬಾ ವೇಗವಾಗಿ ಮಾತನಾಡುವುದರಿಂದ ಅದು ಬೇಗ ಅರ್ಥವಾಗುವುದಿಲ್ಲ. ಈ ಟ್ರೇಲರ್ ನಲ್ಲಿ ಆ ಭಾಷೆ ಪ್ರಾಮಿಸಿಂಗ್ ಆಗಿ ಕಾಣುತ್ತಿದೆ. ನಿರ್ದೇಶಕರ ಹಲವಾರು ಗೆಳೆಯರು ಈ ಸಿನಿಮಾವನ್ನು ಪ್ರೀಮಿಯರ್ ಶೋ ಸ್ಪಾನ್ಸರ್ ಮಾಡುತ್ತಿದ್ದು, ನಾನು ಅವರಿಗೆ ಸಾಥ್ ಕೊಡುತ್ತಿದ್ದೇನೆ. ಹೊಸಬರ ಸಿನಿಮಾಗೆ ನೀವು ಬೆಂಬಲ ಕೊಡಿ ಎಂದರು.

ನಿರ್ದೇಶಕ ನಾಗೇಂದ್ರ ಗಾಣಿಗ ಮಾತನಾಡಿ, ನನ್ನ ನಿರ್ದೇಶನದ ಮೊದಲ ಸಿನಿಮಾ. ಈ ಚಿತ್ರವಾಗಲೂ ಮೊದಲ ಕಾರಣ ನನ್ನ ಅಕ್ಕ, ಮನೆಯವರು. ನಂತರ ಕಿರಣ್. ಅವರ ತಂದೆ. ಅವರೇ ಸ್ವತಃ ಪೆÇ್ರಡಕ್ಷನ್ ಶುರು ಮಾಡಿ ಸಿನಿಮಾಗೆ ಬೆಂಬಲವಾಗಿ ನಿಂತಿದ್ದಾರೆ. ಇಡೀ ತಂಡ ನನಗೆ ತುಂಬಾ ಸಪೆÇೀರ್ಟ್ ಮಾಡಿದರು. ಬಾಂಧವ್ಯ ಪ್ರೀತಿಗೋಸ್ಕರ ಸಿನಿಮಾ ಮಾಡಿದ್ದೇವೆ. ಸಿನಿಮಾ ಚೆನ್ನಾಗಿ ಬಂದಿದೆ. ಅದ್ಭುತ ಅಲ್ಲದೇ ಹೋದರು ನೋಡಿದವರು ಚೆನ್ನಾಗಿಲ್ಲ ಅನ್ನೋಲ್ಲ. ಇದು ಒಂದೊಳ್ಳೆ ಪ್ರಯತ್ನ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಇದು ಮೊದಲ ಸಿನಿಮಾ, ಮೊದಲ ಹೆಜ್ಜೆ ನಿಮ್ಮ ಆಶೀರ್ವಾದ ಇರಲಿ ಎಂದರು.

ನಟ ರಥ ಕಿರಣ್ ಮಾತನಾಡಿ, ನನ್ನ ಇಂಡಸ್ಟ್ರೀಗೆ ಲಾಂಚ್ ಮಾಡಿದ್ದು ಅಪ್ಪು ಸರ್. ಆ ನಂತರ ಸುನಿ ಸರ್ ಅವರು ಬೆಂಬಲ ಇರಲಿಲ್ಲ ಎಂದರೆ ಸಿನಿಮಾ ಆಗುತ್ತಿರಲಿಲ್ಲ. ಈ ಚಿತ್ರ ಆರಂಭದಿಂದ ಇಲ್ಲಿವರೆಗೂ ಬೆನ್ನೆಲುಬಾಗಿ ನಿಂತವರು ರವಿ ಬಸ್ರೂರ್. ಅವರು ಈ ಚಿತ್ರಕ್ಕೆ ಹಣ ಹಾಕಿದ್ದಾರೆ. ಸಂಗೀತ ಒದಗಿಸಿದ್ದಾರೆ. ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ ಸರ್ ನಮಗೆ ಸಾಥ್ ಕೊಟ್ಟಿದ್ದಾರೆ. ನಾನು ಅಭಿ ಎಂಬ ಪಾತ್ರ ಮಾಡಿದ್ದೇನೆ. ನನ್ನ ಬಾಲ್ಯದ ಪಾತ್ರವನ್ನು ರವಿ ಬಸ್ರೂರ್ ಮಗ ಮಾಡಿದ್ದಾರೆ. ಅಕ್ಟೋಬರ್ 6ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ ಎಂದರು.

ನಟ ಸಿದ್ದು ಮೂಲಿಮನಿ ಮಾತನಾಡಿ, ಅಭಿರಾಮಚಂದ್ರ ಮನಸ್ಸಿಗೆ ತುಂಬಾ ಹತ್ತಿರವಾದ ಸಿನಿಮಾ. ಸಾಕಷ್ಟು ಸಿನಿಮಾ ಮಾಡುತ್ತಿದ್ದೇನೆ. ಆದರೆ ಈ ಚಿತ್ರ ಏನೋ ಗೊತ್ತಿಲ್ಲ ಅತಿಯಾದ ಪ್ರೀತಿ. ನಾಗೇಂದ್ರ ಅವರು ಕಥೆ ತುಂಬಾ ಚೆನ್ನಾಗಿದೆ. ಈ ಚಿತ್ರದಲ್ಲಿ ರಾಮನಾಗಿ ಪಾತ್ರ ನಿರ್ವಹಿಸಿದ್ದೇನೆ. ಮಂಡ್ಯ ಹುಡುಗ ಬೆಂಗಳೂರಿಗೆ ಬಂದು ಕೆಲಸ ಮಾಡ್ತಾನೆ. ನಿಮ್ಮಲ್ಲಿರುವ ಮೂರು ಜನ ನಾವು. ನಿಮಗೆ ಬೇಗ ಕನೆಕ್ಟ್ ಆಗುತ್ತೇವೆ ಎಂದು ತಿಳಿಸಿದರು.

ನಾಟ್ಯರಂಗ ಮಾತನಾಡಿ, ನಾನು ಚಂದ್ರ ಎಂಬ ಪಾತ್ರ ಮಾಡಿದ್ದೇನೆ. ನಾಗೇಂದ್ರ ನಮ್ಮದೂ ಕಿನಾರೆ ಸಮಯದಿಂದಲೂ ಗೆಳೆತನ. ತುಂಬಾ ಹತ್ತಿರದಿಂದ ನೋಡಿರುವುದರಿಂದ ನನ್ನ ಗುಣಲಕ್ಷಣಗಳ ಪಾತ್ರವನ್ನು ನೀಡಿದ್ದಾರೆ. ಮಜವಾದ ಕ್ಯಾರೆಕ್ಟರ್ ಎಂದರು.

ನಾಯಕಿ ಶಿವಾನಿ ರೈ ಮಾತನಾಡಿ, ಇದು ನನ್ನ ಮೊದಲ ಸಿನಿಮಾ. ನಾನು ಮಂಡ್ಯ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸರ್ ಕಥೆ ಹೇಳಿದಾಗ ತುಂಬಾ ಕನೆಕ್ಟ್ ಆಯಿತು. ತ್ರಿಕೋನ ಪ್ರೇಮ ಕಥೆ ಇದು ಎಂದರು.

ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ನಾಗೇಂದ್ರ ಗಾಣಿಗ “ಅಭಿರಾಮಚಂದ್ರ’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಅಭಿರಾಮಚಂದ್ರ’ ಸಿನಿಮಾದಲ್ಲಿ ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಶಿವಾನಿ ರೈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವೀಣಾ ಸುಂದರ್, ಸುಂದರ್, ಎಸ್. ನಾರಾಯಣ್, ಪ್ರಕಾಶ್ ತುಮ್ಮಿನಾಡು, ಪವನ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಎ.ಜಿ.ಎಸ್ ಎಂಟಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್’ ಬ್ಯಾನರ್‍ನಡಿ ಎ. ಜಿ. ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ಗಮನಸೆಳೆಯುತ್ತಿರುವ ಅಭಿರಾಮಚಂದ್ರ ಸಿನಿಮಾ ಅಕ್ಟೋಬರ್ 6ಕ್ಕೆ ಬಿಡುಗಡೆಯಾಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin