Action Prince Dhruva Sarja visited by Yuvaraja Nikhil

ಯುವರಾಜ ನಿಖಿಲ್ ಭೇಟಿ ಮಾಡಿದ ಆಕ್ಷನ್ ಪ್ರಿನ್ಸ್ ದೃವ ಸರ್ಜಾ - CineNewsKannada.com

ಯುವರಾಜ ನಿಖಿಲ್ ಭೇಟಿ ಮಾಡಿದ ಆಕ್ಷನ್ ಪ್ರಿನ್ಸ್ ದೃವ ಸರ್ಜಾ

ಕನ್ನಡ ಚಿತ್ರರಂಗದ ಭರವಸೆಯ ನಟರಲ್ಲಿ ಯುವರಾಜ ನಿಖಿಲ್ ಕುಮಾರ್ ಮತ್ತು ಆಕ್ಷನ್ ಪ್ರಿನ್ಸ್ ದೃವ ಸರ್ಜಾ ಕೂಡ. ಈ ಇಬ್ಬರೂ ನಟರು ಹಲವು ವರ್ಷದಿಂದ ಚಿತ್ರರಂಗದಲ್ಲಿದ್ದರೂ ಭೇಟಿ ಮಾಡಿದ್ದು ವಿರಳ.

ಇದೀಗ ಯುವರಾಜ ನಿಖಿಲ್ ಅವರನ್ನು ಆಕ್ಷನ್ ಪ್ರಿನ್ಸ್ ದೃವ ಸರ್ಜಾ ಭೇಟಿ ಮಾಡಿ ಹಲವು ಹೊತ್ತು ಚರ್ಚೆ ನಡೆಸಿರುವುದು ಇಬ್ಬರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ.

ರಾಜಕೀಯದಲ್ಲಿ ಬ್ಯುಸಿಯಾಗಿರುವ ನಟ ನಿಖಿಲ್, ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸುತ್ತಿದ್ದಾರೆ

ಸದ್ಯ ಲೈಕಾ ಸಂಸ್ಥೆ ನಿರ್ಮಾಣದ, ಲಕ್ಷ್ಮಣ್ ನಿರ್ದೇಶನದ ಚಿತ್ರದಲ್ಲಿ ನಿಖಿಲ್ ನಟಿಸುತ್ತಿದ್ದು ಚಿತ್ರದ ಸೆಕೆಂಡ್ ಶೆಡ್ಯೂಲ್ ಸ್ಟಾರ್ಟ್ ಆಗಿದೆ. ಐದು ತಿಂಗಳಲ್ಲಿ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಗುರಿ ಇಟ್ಟುಕೊಂಡಿರುವ ತಂಡ ಬಿರುಸಿನಲ್ಲಿ ಚಿತ್ರೀಕರಣ ಮಾಡುತ್ತಿದೆ. ಈ ನಡುವೆ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ಜಾಗಕ್ಕೆ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಪ್ರ್ರೈಸ್ ಎಂಟ್ರಿ ಕೊಟ್ಟಿದ್ದಾರೆ.

ನಿಖಿಲ್ ಹಾಗೂ ಧ್ರುವ ಸರ್ಜಾ ಒಟ್ಟಿಗೆ ಕಾಣಿಸಿಕೊಂಡಿದ್ದು ತೀರ ಕಡಿಮೆ. ಆದರೆ ಇದೇ ಮೊದಲ ಬಾರಿಗೆ ಇಬ್ಬರು ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಇದೇ ಸಮಯದಲ್ಲಿ ನಿಖಿಲ್ ಅವರ ಹೊಸ ಸಿನಿಮಾ ಬಗ್ಗೆ ಹಾಗೂ ಧ್ರುವ ಅವರ ಮಾರ್ಟಿನ್ ಚಿತ್ರದ ಬಗ್ಗೆ ಚರ್ಚಿಸಿದ್ದಾರೆ.

ಇದಷ್ಟೇ ಅಲ್ಲದೇ ಇಬ್ಬರೂ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಮಾತನಾಡುತ್ತಾ ಕೆಲ ಸಮಯ ಕಳೆದಿದ್ದಾರೆ. ಅಪರೂಪಕ್ಕೆ ಸೆಟ್ ಗೆ ಬಂದ ಧ್ರುವ ಅವರನ್ನು ಕಂಡು ನಿಖಿಲ್ ಕೂಡ ಸಪ್ರ್ರೈಸ್ ಆಗಿದ್ದು ಅಪರೂಪದ ಗೆಳೆಯನನ್ನ ಪ್ರೀತಿಯಿಂದ ಬರಮಾಡಿಕೊಂಡು ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ. ಒಟ್ಟಾರೆ ಈ ಇಬ್ಬರು ಸ್ಟಾರ್ ನಟರ ಭೇಟಿ ಅಭಿಮಾನಿಗಳಿಗೆ ಖುಷಿ ಕೊಡುವುದರ ಜೊತೆಗೆ ಕುತೂಹಲವನ್ನೂ ಹುಟ್ಟುಹಾಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin