Actor Darshan gets green signal for work on "Devil"

“ಡೆವಿಲ್” ಚಿತ್ರದ ಕೆಲಸ ಕಾರ್ಯ ಗಳಿಗೆ ನಟ ದರ್ಶನ್ ಹಸಿರು ನಿಶಾನೆ - CineNewsKannada.com

“ಡೆವಿಲ್” ಚಿತ್ರದ ಕೆಲಸ ಕಾರ್ಯ ಗಳಿಗೆ ನಟ ದರ್ಶನ್ ಹಸಿರು ನಿಶಾನೆ

ನನ್ನನ್ನು ನಂಬಿ ಕನಸು ಕಂಡಿರುವ ನಿರ್ದೇಶಕರು ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರಿಗೆ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ “ ದಿ ಡೆವಿಲ್ ” ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ”..

ಹೀಗೆನ್ನುವ ಮೂಲಕ ಬಹು ಅನಿರೀಕ್ಷಿತ ” ಡೆವಿಲ್ ” ಚಿತ್ರದ ಮುಂದಿನ ಕೆಲಸ ಕಾರ್ಯಗಳಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಸಿರು ನಿಶಾನೆ ತೋರಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಅವರ ಮೂಲಕ ಸೆಲೆಬ್ರಿಟಿಗಳಿಗೆ ,‌ ನಿರ್ಮಾಪಕರು, ನಿರ್ದೇಶಕರಿಗೆ ಸಂದೇಶ ರವಾನಿಸಿದ್ದಾರೆ. ನಟ ದರ್ಶನ್ ಅವರು ಬರೆದಿರುವ ಸಂದೇಶದ ವಿವರ…

ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.

ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.

ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ “ ದಿ ಡೆವಿಲ್ ” ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.
ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.

ನಿಮ್ಮ ಪ್ರೀತಿಯ ದಾಸ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin