Actor Darshan's 'The Devil' to shoot speech portion in Rajasthan

ನಟ ದರ್ಶನ ನಟನೆಯ “ದಿ ಡೆವಿಲ್” ಚಿತ್ರಕ್ಕೆ ರಾಜಸ್ತಾನದಲ್ಲಿ ಮಾತಿನ ಭಾಗದ ಚಿತ್ರೀಕರಣ - CineNewsKannada.com

ನಟ ದರ್ಶನ ನಟನೆಯ “ದಿ ಡೆವಿಲ್” ಚಿತ್ರಕ್ಕೆ ರಾಜಸ್ತಾನದಲ್ಲಿ ಮಾತಿನ ಭಾಗದ ಚಿತ್ರೀಕರಣ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ” ದಿ ಡೆವಿಲ್” ಚಿತ್ರದ ಚಿತ್ರೀಕರಣ ರಾಜಸ್ತಾನದಲ್ಲಿ ಬಿರುಸಿನಿಂದ ಸಾಗಿದೆ. ಅಭಿಮಾನಿಗಳಿಗೆ ಸದ್ಯದಲ್ಲಿಯೇ ಸಿಹಿ ಸುದ್ದಿ ನೀಡಲು ದರ್ಶನ್ ಮುಂದಾಗಿದ್ದಾರೆ

#Dharshanthoogudeepa

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ರಾಜಸ್ತಾನದ ಮಾತಿನ ಭಾಗದ ಚಿತ್ರೀಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚನ ರೈ, ಮಹೇಶ್ ಮಂಜ್ರೇಕರ್, ಅಚ್ಯುತಕುಮಾರ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಸುಧಾಕರ್.ಎಸ್.ರಾಜ್ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.

ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸುತ್ತಿದ್ದಾರೆ. ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin