Actor Dharma Keerthiraj's movie "Bullet" released on June 20

ನಟ ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ಜೂನ್ 20ರಂದು ಬಿಡುಗಡೆ - CineNewsKannada.com

ನಟ ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ಜೂನ್ 20ರಂದು ಬಿಡುಗಡೆ

ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ನಟ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆಯಾಗಿದ್ದು ಚಿತ್ರ ಇದೇ ಜೂನ್ 20 ರಂದು ತೆರೆಗೆ ಬರಲಿದೆ.

ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಆರ್ ಎಂ ಎನ್ ರಮೇಶ್ ಹಾಗೂ ನಟಿ ನಿಖಿತ ಸ್ವಾಮಿ ಅತಿಥಿಗಳಾಗಿ ಆಗಮಿಸಿ ಟೀಸರ್ ಹಾಗೂ ಹಾಡು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು

ನಿರ್ದೇಶಕ ಸತ್ಯಜಿತ್ ಶಬ್ಬೀರ್ ಮಾತನಾಡಿ ಭಾರತಿರಾಜ ನಿರ್ದೇಶನದ “ಪದಿನಾರು ವಯದಿನಿಲೆ” ಚಿತ್ರದಲ್ಲಿ ಅಭಿನಯಿಸುವ ಮೂಲಕ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಚಿತ್ರದ ಸಂಗೀತ ನಿರ್ದೇಶಕ ಇಳಯರಾಜ ಶಬ್ಬೀರ್ ಅಂತ ಇದ್ದ ಹೆಸರಿನ ಮುಂದೆ ಸತ್ಯಜಿತ್ ಎಂದು ಸೇರಿಸಿದರು. ಅಂದಿನಿಂದ ನನ್ನ ಹೆಸರು ಸತ್ಯಜಿತ್ ಶಬ್ಬೀರ್ ಆಯಿತು ಎಂದರು.

ಈವರೆಗೂ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳ 75 ಚಿತ್ರಗಳಲ್ಲಿ ನಟಿಸಿದ್ದೇನೆ. ಮೂಲತಃ ಕರ್ನಾಟಕದ ಆನಂತರ ಚೆನ್ನೈ ಹಾಗೂ ಮುಂಬೈನಲ್ಲಿ ನೆಲೆಸಿದ್ದೆ. ಮೊದಲ ಚಿತ್ರವನ್ನು ಕನ್ನಡದಲ್ಲೇ ನಿರ್ಮಿಸಿ, ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಬುಲೆಟ್” ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್ ಅಭಿನಯಿಸಿದ್ದಾರೆ. ಶ್ರೀಯಾ ಶುಕ್ಲ ನಾಯಕಿ. ಹಿರಿಯ ನಟಿ ಭವ್ಯ, ಶೋಭ್ ರಾಜ್, ಶಿವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ ಎಂದು ಹೇಳಿದರು

ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ರಾಜ್ ಭಾಸ್ಕರ್ ಸಂಗೀತ ನಿರ್ದೇಶನ ಹಾಗೂ ಗುರುಪ್ರಸಾದ್ ಸಂಕಲನ ಚಿತ್ರಕ್ಕಿದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೂಡಿಬಂದಿದೆ. ಇದೇ ಜೂನ್ 20 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಜಯದೇವ ಫಿಲಂಸ್ ಮೂಲಕ ಮರಿಸ್ವಾಮಿ ಅವರು ವಿತರಣೆ ಮಾಡಲಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದು ಕೇಳಿಕೊಂಡರು

ನಾಯಕ ಧರ್ಮ ಕೀರ್ತಿರಾಜ್ ಮಾತನಾಡಿ ಸತ್ಯಜಿತ್ ಶಬ್ಬೀರ್ ನಿರ್ದೇಶನದಲ್ಲಿ ಉತ್ತಮ ಚಿತ್ರ ನಿರ್ಮಾಣವಾಗಿದೆ. ಪಾತ್ರ ಕೂಡ ಚೆನ್ನಾಗಿದೆ. ವರ್ಷದಲ್ಲಿ ನಾನು ನಾಯಕನಾಗಿ ನಟಿಸಿ ಬಿಡುಗಡೆಯಾಗುತ್ತಿರುವ ಮೂರನೇ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಿಳಿಸಿದರು.

ಹಿರಿಯ ನಟಿ ಭವ್ಯ ಮಾತನಾಡಿ ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಹೇಳಿದರು.

ಛಾಯಾಗ್ರಾಹಕ ಪಿ.ವಿ.ಆರ್ ಸ್ವಾಮಿ ಮಾತನಾಡಿ “ಬಲೆಟ್” ನನ್ನ ಛಾಯಾಗ್ರಹಣದ 50 ನೇ ಚಿತ್ರ ಎಂದು ಹೇಳಿದರು.

ನಿರ್ದೇಶಕ ರಾಜ್ ಭಾಸ್ಕರ್ ಮಾತನಾಡಿ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದು ಹಾಡುಗಳ ಬಗ್ಗೆ ಸಂಗೀತ ಮಾಹಿತಿ ನೀಡಿದರು. ಹಾಡು ಬರೆದಿರುವ ಮನು ಕುಮಾರ್, ನಟ ಶರತ್, ವಿತರಕ ಜಯದೇವ ಫಿಲಂಸ್ ಮರಿಸ್ವಾಮಿ ಮುಂತಾದವರು ಹಾಜರಿದ್ದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin