ಯುವ ಪ್ರತಿಭೆ ಜೊತೆ ಕೈ ಜೋಡಿಸಿದ ನಟ ನಿರೂಪ್ ಭಂಡಾರಿ : ಜನವರಿಯಿಂದ ಚಿತ್ರೀಕರಣ

ರಂಗಿತರಂಗ ಚಿತ್ರದ ಮೂಲಕ ಸ್ಯಾಂಡಲ್ ವುಡ್‍ಗೆ ಚಿರಪರಿಚಿತರಾದ ನಿರೂಪ್ ಭಂಡಾರಿ ಆ ನಂತರ ರಾಜರಥ, ವಿಕ್ರಾಂತ್ ರೋಣ, ಆದಿಲಕ್ಷ್ಮಿಪುರಾಣ ಮತ್ತು ವಿಂಡೋ ಸೀಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಅವರು ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಕೆಲಸ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ನಿಭಾಯಿಸುತ್ತಿರುವ ಯುವ ಪ್ರತಿಭೆ ಸಚಿನ್ ವಾಲಿ ಜೊತೆ ಕೈ ಜೋಡಿಸಿದ್ದಾರೆ.

ಕೆಲವೊಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಸಚಿನ್ ವಾಲಿ ಸ್ವತಂತ್ರ ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್ ಟೈನರ್ ಕಥಾಹಂದರ ಹೇಳಲು ಸಚಿನ್ ಹೊರಟ್ಟಿದ್ದಾರೆ. ಅವರ ಚೊಚ್ಚಲ ಪ್ರಯತ್ನದಲ್ಲಿ ನಾಯಕನಾಗಿ ನಿರೂಪ್ ಭಂಡಾರಿ ಬಣ್ಣ ಹಚ್ಚಲಿದ್ದಾರೆ.

ಸ್ಕ್ರಿಪ್ಟ್ ಪೂಜೆ ಮುಗಿಸಿಕೊಂಡಿರುವ ಈ ಸಿನಿಮಾಗೆ ಅಂಕೆತ್ ಸಿನಿಮಾಸ್ ಅಡಿಯಲ್ಲಿ ಅಂಕಿತ್ ಸೋನಿಗಾರ ಚಿತ್ರ ನಿರ್ಮಿಸಿಸುತ್ತಿದ್ದು, ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ. ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಜನವರಿಯಿಂದ ಶೂಟಿಂಗ್ ಹೊರಡಲು ಸಜ್ಜಾಗಿರುವ ಚಿತ್ರತಂಡ, ಬೆಂಗಳೂರು, ಶಿವಮೊಗ್ಗ, ತೀರ್ಥಹಳ್ಳಿ, ತುಮಕೂರು ಹಾಗೂ ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದೆ.

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581