Actor Prajwal Devaraj's birthday: 'Karavali' movie poster released

ನಟ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ: ‘ಕರಾವಳಿ’ ಚಿತ್ರದ ಪೋಸ್ಟರ್ ಬಿಡುಗಡೆ - CineNewsKannada.com

ನಟ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ: ‘ಕರಾವಳಿ’ ಚಿತ್ರದ ಪೋಸ್ಟರ್ ಬಿಡುಗಡೆ

‘ಕರಾವಳಿ’ ಸ್ಯಾಂಡಲ್‍ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಮತ್ತು ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ನಿರ್ದೇಶಕ ಗುರುದತ್ ಗಾಣಿಗ ಸಾರಥ್ಯದಲ್ಲಿ ಮೂಡಿ ಬರುತ್ತದೆ. ಕರಾವಳಿ ಈಗಾಗಲೇ ಫಸ್ಟ್ ಲುಕ್ ಮತ್ತು ಪೋಸ್ಟರ್ ಮೂಲಕ ಬಾರಿ ಕುತೂಹಲ ಮೂಡಿಸಿದೆ. ಮತ್ತೊಂದು ಭರ್ಜರಿ ಪೋಸ್ಟರ್ ಅನಾವರಣವಾಗಿದೆ.

ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಪ್ರಯುಕ್ತ ಬಂದಿರುವ ಪೋಸ್ಟರ್ ಕರಾವಳಿ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಸಿನಿಮಾದಿಂದ ಈಗಾಗಲೇ ರಿಲೀಸ್ ಆಗಿರುವ ಪ್ರಜ್ವಲ್ ಅವರ ಎರಡು ಲುಕ್ ವೈರಲ್ ಆಗಿದೆ. ಇದೀಗ ಜನ್ಮದಿನದ ಪ್ರಯುಕ್ತ ಬಿಡುಗಡೆಯಾಗಿರುವ ಮತ್ತೊಂದು ಲುಕ್ ಗಮನ ಸೆಳೆಯುತ್ತದೆ.

ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ಈ ಸಿನಿಮಾದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಯಕ್ಷಗಾನ ಕಂಬಳ, ಮಹಿಷಾಸುರ ಹೀಗೆ ವೆರೈಟಿ ಗೆಟಪ್ ನಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಪ್ರಜ್ವಲ್ ಯಕ್ಷಗಾನ ಕಲಾವಿದನಾ ಅಥವಾ ಕಂಬಳ ಕೊಡಿಸುವವನಾ, ಡೈನಮಿಕ್ ಪ್ರಿನ್ಸ್ ಪಾತ್ರ ಯಾವುದು ಎನ್ನುವ ಕುತೂಹಲ ಹೆಚ್ಚಾಗಿದೆ. ಪ್ರಜ್ವಲ್ ಅವರ ವೆರೈಟಿ ಗೆಟಪ್‍ನ ಪೆÇೀಸ್ಟರ್ ಗಳನ್ನು ನೋಡುತ್ತಿದ್ದರೆ ಮೂರು ವಿಭಿನ್ನ ಪಾತ್ರದಲ್ಲಿ ನಟಿಸುತ್ತಿದ್ದಾರಾ ಎನ್ನುವ ಅನುಮಾನ ಕೂಡ ಮೂಡಿಸುವಂತಿದೆ.

ಹುಟ್ಟುಹಬ್ಬ ಪ್ರಯುಕ್ತ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಪ್ರಜ್ವಲ್ ಕೋಣಗಳ ಮಧ್ಯೆ ಒಬ್ಬಂಟಿಯಾಗಿ ಕೊಟ್ಟಿಗೆಯಲ್ಲಿ ಕುಳಿತಿದ್ದಾರೆ. ಗಂಭೀರ ನೋಟ ಬೀರುತ್ತಾ ಕುಳಿತಿರುವ ಪ್ರಜ್ವಲ್ ಅವರ ಸಿಂಪಲ್ ವ್ಯಕ್ತಿತ್ವದ ಲುಕ್ ಆಕರ್ಷಕವಾಗಿದೆ.

ಕರಾವಳಿ ಈಗಾಗಲೇ 60ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದಲ್ಲಿ ಪ್ರಜ್ವಲ್‍ಗೆ ನಾಯಕಿಯಾಗಿ ನಟಿ ಸಂಪದಾ ಕಾಣಿಸಿಕೊಂಡಿದ್ದಾರೆ. ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ನಿರ್ಮಾಣವಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin