Actor Puneeth Rajkumar starrer "Anjani Putra" is re-released on May 10
ನಟ ಪುನೀತ್ ರಾಜಕುಮಾರ್ ಅಭಿನಯದ ಮೇ 10 ರಂದು “ಅಂಜನಿ ಪುತ್ರ” ಮರು ಬಿಡುಗಡೆ
ಎಂ.ಎನ್.ಕೆ ಮೂವೀಸ್ ಲಾಂಛನದಲ್ಲಿ ಎಂ.ಎನ್ ಕುಮಾರ್ ನಿರ್ಮಿಸಿ, ಎ.ಹರ್ಷ ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ” ಅಂಜನಿಪುತ್ರ” ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಅದ್ದೂರಿಯಾಗಿ ಮರು ಬಿಡುಗಡೆ ಮಾಡುತ್ತಿರುವುದಾಗಿ ನಿರ್ಮಾಪಕ ಎಂ ಎನ್ ಕುಮಾರ್ ತಿಳಿಸಿದ್ದಾರೆ.

ಈ ಚಿತ್ರದಲ್ಲಿ ಪುನೀತ್ ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದರು. ರವಿ ಬಸ್ರೂರ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರದ “ಬಾರಿ ಖುಷಿ ಮಾರೆ ನಂಗೆ” ಸೇರಿದಂತೆ ಎಲ್ಲಾ ಹಾಡುಗಳು ಜನಪ್ರಿಯವಾಗಿದೆ.

ಬೇಸಿಗೆ ರಜೆಯ ಈ ಸಮಯದಲ್ಲಿ ಸೂಪರ್ ಹಿಟ್ “ಅಂಜನಿ ಪುತ್ರ” ಚಿತ್ರವನ್ನು ಮತ್ತೊಮ್ಮೆ ತೆರೆಯ ಮೇಲೆ ನೋಡಲು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

