Actor Raj B Shetty's film "Su From So" to release on July 25th

ನಟ ರಾಜ್ ಬಿ ಶೆಟ್ಟಿ ನಿರ್ಮಾಣದ “ಸು ಫ್ರಮ್ ಸೋ” ಚಿತ್ರ ಜುಲೈ 25 ರಂದು ಬಿಡುಗಡೆ - CineNewsKannada.com

ನಟ ರಾಜ್ ಬಿ ಶೆಟ್ಟಿ ನಿರ್ಮಾಣದ “ಸು ಫ್ರಮ್ ಸೋ” ಚಿತ್ರ ಜುಲೈ 25 ರಂದು ಬಿಡುಗಡೆ

ಖ್ಯಾತ ನಟ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ಹಾಗೂ ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡಿರುವ ಹಾಗೂ ಜೆಪಿ ತುಮಿನಾಡು ನಿರ್ದೇಶನದ “ಸು ಫ್ರಮ್ ಸೋ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಚಿತ್ರ ಜುಲೈ 25 ರಂದು ತೆರೆಗೆ ಬರಲಿದೆ.

ಈಗಾಗಲೇ ಬಿಡುಗಡೆಯಾಗಿರುವ “ಡಾಕ್ಸ್ ಅಂಥಮ್” ಹಾಡಿಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಕಾಮಿಡಿ ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರ ಜುಲೈ 25 ರಂದು ತೆರೆಗೆ ಬರಲಿದೆ.

ನಿರ್ಮಾಪಕ ರಾಜ್ ಬಿ ಶೆಟ್ಟಿ ಮಾತನಾಡಿ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಗೆಳೆಯ ಜೆಪಿ ತುಮಿನಾಡ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಚಿತ್ರವಿದು. ಆರು ವರ್ಷಗಳ ಹಿಂದೆಯೇ ಸಿದ್ದ ಮಾಡಿಕೊಂಡಿದ್ದ ಕಥೆ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಬಹಳ ಇಷ್ಟಪಡುವ ಕಾಮಿಡಿ ಜಾನರ್‍ನ ಚಿತ್ರವಿದು. “ಸು ಫ್ರಮ್ ಸೋ” ಎಂದರೆ ಸುಲೋಚನ ಹಾಗೂ ಸೋಮೇಶ್ವರ ಎಂಬ ಪಾತ್ರ ಹಾಗೂ ಸ್ಥಳದ ಹೆಸರು ಎಂದು ಮಾಹಿತಿ ಹಂಚಿಕೊಂಡರು

ಬಹುತೇಕ ಹೊಸತಂಡವೇ ಸೇರಿ ಮಾಡಿರುವ ಚಿತ್ರಕ್ಕೆ ಬೆಳ್ತಂಗಡಿ, ವೇಣೂರು, ಕಕ್ಯಪದವು ಸುತ್ತಮುತ್ತ 50ದಿನಗಳ ಚಿತ್ರೀಕರಣ ನಡೆದಿದೆ. ನಿರ್ದೇಶನ ಮಾಡಿರುವ ಜೆಪಿ ತುಮಿನಾಡ, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡ, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಮುಂತಾದವರು ನಟಿಸಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣ, ಸುಮೇಧ್ ಕೆ ಅವರ ಸಂಗೀತ ನಿರ್ದೇಶನ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಹಿನ್ನಲೆ ಸಂಗೀತ ಸಂದೀಪ್ ತುಳಸಿದಾಸ್ ಅವರದು. ಶಶಿಧರ್ ಶೆಟ್ಟಿ ಬರೋಡಾ ಹಾಗೂ ರವಿ ರೈ ಕಳಸ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್ “ಡಾoಕ್ಸ್ ಅಂಥಮ್” ಹಾಡು ಹಾಗೂ ಟ್ರೇಲರ್ ಈಗಾಗಲೇ ಜನರ ಮನ ತಲುಪಿದೆ. ಚಿತ್ರ ಜುಲೈ 25 ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ . ಪ್ರೋತ್ಸಾಹ ನೀಡಿ ಎಂದು ತಿಳಿಸಿದರು.

ನಿರ್ದೇಶಕ ಜೆಪಿ ತುಮಿನಾಡ ಮಾತನಾಡಿ ಸಿನಿಮಾ ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದ ನಾನು, ನಟನಾದೆ. ಈಗ ಕೆಲವು ವರ್ಷಗಳ ನಂತರ ಮೊದಲ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಇನ್ನೂ ಇದೊಂದು ಕಾಲ್ಪನಿಕ ಕಥೆ. ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥೆಯೂ ಹೌದು. ಚಿತ್ರತಂಡದ ಸಹಕಾರದಿಂದ ಇದೇ ಜುಲೈ 25 ಒಂದೊಳ್ಳೆ ಚಿತ್ರ ನಿಮ್ಮ ಮುಂದೆ ಬರುತ್ತಿದೆ. ನೋಡಿ. ಹಾರೈಸಿ ಎಂದರು

ನಿರ್ಮಾಪಕ ರವಿ ರೈ ಕಳಸ ಮಾತನಾಡಿ ನಮ್ಮ ಚಿತ್ರಕ್ಕೆ ಎಲ್ಲರ ಬೆಂಬಲವಿರಲಿ ಎಂದರು. ಚಿತ್ರದಲ್ಲಿ ಆರು ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಸುಮೇಧ್ ತಿಳಿಸಿದರು.

ಕಾರ್ಯಕಾರಿ ನಿರ್ಮಾಪಕ ಬಾಲು ಕುಮಟಾ, ಕಲಾವಿದರಾದ ದೀಪಕ್ ರೈ ಪಣಜೆ, ಶನೀಲ್ ಗೌತಮ್, ಸಂಧ್ಯಾ ಅರ್ಕೆರೆ, ಮೈಮ್ ರಾಮದಾಸ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಪ್ರೊಡಕ್ಷನ್ಸ್ ಡಿಸೈನರ್ ಸುಷ್ಮ ಹಾಗೂ ಸಂಕಲನಕಾರ ನವೀನ್ ಶೆಟ್ಟಿ, ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin