Actor Raj.B Shetty's "Rupantara" is an "Orange" garden that sprouts during the rainy season.

ನಟ ರಾಜ್.ಬಿ ಶೆಟ್ಟಿ ನಟನೆಯ “ರೂಪಾಂತರ” ಮಳೆಗಾಲದಲ್ಲಿ ಚಿಗುರೊಡೆದ “ಕಿತ್ತಾಳೆ” ತೋಟ - CineNewsKannada.com

ನಟ ರಾಜ್.ಬಿ ಶೆಟ್ಟಿ ನಟನೆಯ “ರೂಪಾಂತರ” ಮಳೆಗಾಲದಲ್ಲಿ ಚಿಗುರೊಡೆದ “ಕಿತ್ತಾಳೆ” ತೋಟ

ಚಿಟಿ ಚಿಟಿ ಜಿನುಗುವ ಮಳೆಯಲ್ಲಿ ಹಾಡೊಂದನ್ನು ಕೇಳುವುದು ಯಾರಿಗೆ ತಾನೆ ಇಷ್ಟವಿಲ್ಲ. ಇದನ್ನು ಚೆನ್ನಾಗಿ ಅರಿತಂತಿತೆ ರೂಪಾಂತರ ಚಿತ್ರತಂಡ. ಹೌದು ಒಂದು ಮೊಟ್ಟೆಯ ಕಥೆಯ ಮೂಲಕ ಚಿತ್ರರಂಗಕ್ಕೆ ಬಂದು ಜನರ ಮೆಚ್ಚುಗೆ ಗಳಿಸಿದ ಅದೇ ಚಿತ್ರತಂಡ ರೂಪಾಂತರ ಎನ್ನುವ ಸಿನೆಮಾ ಮಾಡಿ ಬಿಡುಗಡೆಗೆ ಸಿದ್ದವಾಗಿದ್ದು, ಅದರ ‘ಕಿತ್ತಾಳೆ’ ಎನ್ನುವ ಹಾಡನ್ನು ಬಿಡುಗಡೆಗೊಳಿಸುವ ಮೂಲಕ ಸಿನಿ ರಸಿಕರ,ಸಂಗೀತ ಆಸ್ವಾದಕರ ಮನವನ್ನು ತಣಿಸಿದೆ.

ರಾಜ್ ಮಿಧುನ್ ಮ್ಯಾಜಿಕ್

ಒಂದು ಮೊಟ್ಟೆಯ ಕಥೆಯ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಾಜ್.ಬಿ,ಶೆಟ್ಟಿ ಮತ್ತು ಮಿಧುನ್ ಮುಕುಂದನ್ ಯಶಸ್ವಿ ಜೋಡಿಯಾಗಿ ಅನೇಕ ಹಿಟ್ ಹಾಡುಗಳನ್ನು ಕೊಡುತ್ತಾ ಬಂದಿದ್ದು ಈಗ ರೂಪಾಂತರ ಚಿತ್ರದ ಕಿತ್ತಾಳೆ ಹಾಡನ್ನು ಬಿಡುಗಡೆಗೊಳಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಈ ಹಿಂದೆ ಅನೇಕ ಚಿತ್ರಗಳಿಗೆ ರಾಜ್ ಸಾಹಿತ್ಯ ಬರೆದು ಮಿಧುನ್ ಸಂಗೀತ ನೀಡಿದ್ದರೂ ಈ ಹಾಡು ಇಬ್ಬರಿಗೂ ಚಿತ್ರರಂಗದಲ್ಲಿ ಹೊಸ ಗುರುತನ್ನು ನೀಡಲಿದೆ. ಮಿಧುನ್ ಅವರ ಹಿಂಪಾದ ಸಂಗೀತಕ್ಕೆ ರಾಜ್ ಅವರ ರಸಭರಿತ ಸಾಹಿತ್ಯ ಸಿಹಿಯಾದ ಕಿತ್ತಾಳೆ ಹಣ್ಣನ್ನು ಸವಿದಂತ ಅನುಭವವನ್ನು ನೀಡುತ್ತಿದೆ ಎಂದು ಅನೇಕ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. ಗರುಡ ಗಮನದ ಮಾದೇವ ಖ್ಯಾತಿಯ ಗಾಯಕಿ ಚೈತ್ರ ಜೆ ಆಚಾರ್ ಅವರು ಈ ಹಾಡಿಗೆ ಧ್ವನಿ ನೀಡಿದ್ದು ಇನ್ನೊಂದು ಹೈಲೈಟ್.

ನಿರೀಕ್ಷೆ ಹೆಚ್ಚು ಮಾಡಿದ ರೂಪಾಂತರ

ಮೊನ್ನೆಯಷ್ಟೆ ಫಸ್ರ್ಟ್ ಲುಕ್ ಪೋಸ್ಟರ್ ನ ಮೂಲಕ ಗಮನ ಸೇಳೆದ ಮಿಥಿಲೇಶ್ ಎಡವಲತ್ ಅವರ ಚೊಚ್ಚಲ ಚಿತ್ರ ಇದಾಗಿದ್ದು ಕನ್ನಡ ಚಿತ್ರರಂಗದಲದಲ್ಲೊಂದು ಹೊಸ ಅಲೆಯನ್ನು ಸೃಷ್ಟಿ ಮಾಡುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ. ರಾಜ್ ಬಿ ಶೆಟ್ಟಿ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆ ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣೆ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್ ನ ಮೂಲಕ ತೆರೆಗೂ ತರುತ್ತಿದ್ದಾರೆ. ಒಂದು ಮೊಟ್ಟೆಯ ಕಥೆ ಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನೂ ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರವಂಕರ್ ಮಾತನಾಡಿ, ಕಿತ್ತಳೆ ಹಾಡು ಹಾಡು ಲೈಟರ್ ಬುಧ್ಧ ಸಂಸ್ಥೆಯ ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದ್ದು, ಈ ಹೊಸ ಪ್ರಯತ್ನವನ್ನು ಕನ್ನಡಿಗರು ಸ್ವಾಗತಿಸುತ್ತಾರೆ ಎಂಬುದು ಸಂಸ್ಥೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin